ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಂಗಳೂರಿನ ನ್ಯೂ ತರಗುಪೇಟೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮೂವರ ಕುಟುಂಬಕ್ಕೆ 2 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಶಾಸಕ ಜಮೀರ್ ಅಹ್ಮದ್ ಘೋಷಿಸಿದ್ದಾರೆ.
ಚಾಮರಾಜಪೇಟೆಯ ನ್ಯೂ ತರಗುಪೇಟೆಯ ಗೋದಾಮಿನಲ್ಲಿ ಸಂಭವಿಸಿದ ನಿಗೂಢ ಸ್ಫೋಟದಲ್ಲಿ ಮೂವರು ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಜಮೀರ್ ಅಹ್ಮದ್, ಅನಾಹುತದಿಂದಾಗಿ ನೋವಾಗಿದ್ದು, ಮೃತಪಟ್ಟ ಮೂವರ ಕುಟುಂಬಕ್ಕೆ 2 ಲಕ್ಷ ಪರಿಹಾರ ನೀಡುವುದಾಗಿ ತಿಳಿಸಿದರು.
ನಾಲ್ವರು ಗಾಯಗೊಂಡಿದ್ದು, ಅವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ನಾನೇ ಭರಿಸುತ್ತೇನೆ. ಸ್ಫೋಟದಲ್ಲಿ ಮೃತಪಟ್ಟವರ ಕುಟುಂಬದವರು ಬಡವರು. ಬಡ ಕುಟುಂಬಕ್ಕೆ ಸರ್ಕಾರ ಕೂಡ ಪರಿಹಾರ ಘೋಷಿಸಲಿ ಎಂದರು.
ಗೋದಾಮಿನಲ್ಲಿ ಪಟಾಕಿ ಸಂಗ್ರಹಿಸಿದ ಬಗ್ಗೆ ಮಾಹಿತಿ ಇದೆ. ಗೋದಾಮು ಮಾಲೀಕ ಗೋದಾಮಿನಲ್ಲಿ ಪಟಾಕಿಗಳನ್ನು ಇಟ್ಟು ಬೇರೆಡೆ ಸರಬರಾಜು ಮಾಡುತ್ತಿದ್ದ. ಆತನ ಪತ್ತೆಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ ಎಂದು ಹೇಳಿದರು.
ನಿಗೂಢ ಸ್ಫೋಟಕ್ಕೆ ಅಸಲಿ ಕಾರಣವೇನು?: ಸ್ಥಳಕ್ಕೆ ದೌಡಾಯಿಸಿದ ಬಾಂಬ್ ಪತ್ತೆದಳ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ