ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಭಯಂಕರ ಶಬ್ಧ ಕೇಳಿಬಂದಿದ್ದು, ಹಲವೆಡೆ ಭೂಮಿ ಕಂಪಿಸಿದ ಅನುಭವವಾಗಿದೆ.
ಮಧ್ಯಾಹ್ನ 12.15ರ ಸುಮಾರಿಗೆ ಭಾರಿ ಶಬ್ಧದೊಂದಿಗೆ ಭೂಮಿ ಕಂಪಿಸಿದೆ. ಆರ್.ಆರ್.ನಗರ, ಮಾಗಡಿ, ಹೆಮ್ಮಿಗೆಪುರ, ಕಗ್ಗಲಿಪುರ, ಕೆಂಗೇರಿ, ಬಿಡದಿ ಭಾಗಗಳಲ್ಲಿ ಭೂಮಿ ಕಂಪಿಸಿದೆ. ರಾಮನಗರ, ಚೆನ್ನಪಟ್ಟಣಗಳಲ್ಲೂ ಹಲವೆಡೆಗಳಲ್ಲಿ ಭೂಮಿ ಕಂಪಿಸಿದೆ.
ಭೂಗರ್ಭದೊಳಗಿಂದ ಭಾರಿ ಶಬ್ಧ ಕೂಡ ಕೇಳಿಬಂದಿದ್ದು, ತಕ್ಷಣ ಕೆಲಕಾಲ ಭೂಮಿ ಅಲುಗಾಡಿದೆ. ಆದರೆ ರಿಕ್ಟರ್ ಮಾಕರದಲ್ಲಿ ಭೂಕಂಪನದ ತೀವ್ರತೆ ದಾಖಲಾಗಿಲ್ಲ ಎಂದು ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ತಿಳಿಸಿದೆ. ಆದರೆ ಭಾರಿ ಶಬ್ಧ, ಕಂಪನದ ಅನುಭವಕ್ಕೆ ಕಾರಣ ಏನೆಂಬುದು ತಿಳಿದುಬಂದಿಲ್ಲ.
ಬೆಳಗಾವಿ: ಬಾರುಕೋಲು ಚಳುವಳಿ ನಡೆಸಿ ಸರ್ಕಾರದ ವಿರುದ್ಧ ರೈತರ ಆಕ್ರೋಶ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ