Latest

ಸ್ನೇಹಿತನೊಂದಿಗೆ ಶಾಪಿಂಗ್ ಕಾಂಪ್ಲೆಕ್ಸ್ ಗೆ ಬಂದ ಯುವತಿ; ಕಾಲು ಜಾರಿ ಬಿದ್ದು ದುರ್ಮರಣ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸ್ನೇಹಿತನೊಂದಿಗೆ ಶಾಪಿಂಗ್ ಮಾಡಲು ಶಾಪಿಂಗ್ ಕಾಂಪ್ಲೆಕ್ಸ್ ಗೆ ತೆರಳಿದ್ದ ಯುವತಿ ಮೆಟ್ಟಿಲುಗಳ ಮೇಲಿನಿಂದ ಜಾರಿ ಬಿದ್ದು ಸಾವನ್ನಪ್ಪಿದ್ದು, ಆಕೆಯನ್ನು ರಕ್ಷಿಸಲು ಹೋದ ಗೆಳೆಯ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನ ಬ್ರಿಗೇಡ್ ರೋಡ್ ನಲ್ಲಿ ನಡೆದಿದೆ.

ಬೆಂಗಳೂರಿನ ಬ್ರಿಗೇಡ್ ರೋಡ್ ನ 5ನೇ ಕ್ರಾಸ್ ನಲ್ಲಿರುವ ಶಾಪಿಂಗ್ ಕಾಂಪ್ಲೆಕ್ಸ್ ಗೆ ಸ್ನೇಹಿತನೊಂದಿಗೆ ಯುವತಿ ಹೋಗಿದ್ದು, ಶಾಪಿಂಗ್ ಕಾಂಪ್ಲೆಕ್ಸ್ ನ ಎರಡನೇ ಫ್ಲೋರ್ ಸ್ಟೇರ್ಸ್ ನಿಂದ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದಿದ್ದಾಳೆ. ಆಕೆ ರಕ್ಷಣೆಗೆಂದು ಮುಂದಾದ ಯುವಕ ಕೂಡ ಬಿದ್ದಿದ್ದು ಗಂಭೀರವಾಗಿ ಗಾಯಗೊಂಡಿದ್ದಾನೆ.

ರಕ್ತದ ಮಡುವಲ್ಲಿ ಬಿದ್ದಿದ್ದ ಯುವತಿಯನ್ನು ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ತೀವ್ರ ರಕ್ತಸ್ರಾವದಿಂದಾಗಿ ಯುವತಿ ಸಾವನ್ನಪ್ಪಿದ್ದಾಳೆ. ಗಾಯಾಳು ಯುವಕ ಕ್ರಿಸ್ ಗೆ ಚಿಕಿತ್ಸೆ ನೀಡಲಾಗುತ್ತಿದೆ.

ಮೃತ ಯುವತಿ ಆಂಧ್ರಪ್ರದೇಶ ಮೂಲದ ಲಿಯಾ ಎಂದು ಗುರುತಿಸಲಾಗಿದೆ. ಗಾಯಾಳು ಯುವಕ ಬೆಂಗಳೂರಿನ ಕ್ರಿಸ್ ಎಂದು ಗುರುತಿಸಲಾಗಿದ್ದು, ಇಬ್ಬರೂ ಬೆಂಗಳೂರಿನ ಕಾಲೇಜೊಂದರಲ್ಲಿ ಬಿಕಾಂ ಎರಡನೇ ವರ್ಷದಲ್ಲಿ ಓದುತ್ತಿದ್ದರು.

ಕಬ್ಬನ್ ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಿಲ್ಲಾಧಿಕಾರಿ ಕಚೇರಿ ಮೇಲೆ ACB ದಾಳಿ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button