ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅವಘಡ ಸಂಭವಿಸಿದ್ದು, ಮೂರು ಅಂತಸ್ತಿನ ಮನೆಯೊಂದು ನೋಡ ನೋಡುತ್ತಿದ್ದಂತೆಯೇ ಕುಸಿದು ಬಿದ್ದುರುವ ಘಟನೆ ನಡೆದಿದೆ.
ಬೆಂಗಳೂರಿನ ಲಕ್ಕಸಂದ್ರದಲ್ಲಿ ಈ ಘಟನೆ ಸಂಭವಿಸಿದ್ದು, ಮೆಟ್ರೋ ಕಾರ್ಮಿಕರು ಈ ಕಟ್ಟಡದಲ್ಲಿ ವಾಸವಾಗಿದ್ದರು. ಕೆಟ್ಟಡ ಬೀಳುವ ವೇಳೆ ಮನೆಯಲ್ಲಿದ್ದ ಕಾರ್ಮಿಕರು ಹೊರ ಬಂದಿದ್ದರಿಂದ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭಿಸಿಲ್ಲ ಎಂದು ತಿಳಿದುಬಂದಿದೆ.
ಹಳೆ ಕಟ್ಟಡ ಇದಾಗಿದ್ದು, ಎರಡು ವರ್ಷಗಳ ಹಿಂದೆಯೇ ಮನೆ ಬಾಗಿ, ಬೀಳುವ ಹಂತ ತಲುಪಿತ್ತು. ಆದಾಗ್ಯೂ ಮನೆ ಮಾಲೀಕ ಕಟ್ಟಡ ತೆರವುಗೊಳಿಸದೇ ನಿರ್ಲಕ್ಷ ವಹಿಸಿದ್ದ. ಇಂದು ಬೆಳಿಗ್ಗೆ ಕಟ್ಟಡ ಕುಸಿದು ಬೀಳುವ ಸಂಭವವಿದೆ ಎಂದು ಅಕ್ಕ-ಪಕ್ಕದವರು ಮನೆಯಲ್ಲಿ ವಾಸವಾಗಿದ್ದ ಮೆಟ್ರೋ ಕಾರ್ಮಿಕರನ್ನು ಹೊರ ಬರುವಂತೆ ಹೇಳಿದ್ದಾರೆ. ಹೀಗಾಗಿ ಕಾರ್ಮಿಕರೆಲ್ಲರೂ ಮನೆಯಿಂದ ಹೊರ ಬಂದಿದ್ದಾರೆ. ಕಾರ್ಮಿಕರೆಲ್ಲ ಮನೆಯಿಂದ ಆಚೆ ಬರುತ್ತಿದ್ದಂತೆಯೇ ನೋಡ ನೊಡುತ್ತಿದ್ದಂತೆ ಮೂರು ಅಂತಸ್ತಿನ ಕಟ್ಟಡ ಸಂಪೂರ್ಣ ಕುಸಿದು ಬಿದ್ದಿದೆ. ಅಕ್ಕ-ಪಕ್ಕದ ಮನೆಗಳಿಗೂ ಹಾನಿಯಾಗಿದೆ.
ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರತಿಭಟನೆ ವೇಳೆ ಡಿಸಿಪಿ ಕಾಲಿನ ಮೇಲೆ ಹರಿದ ರೈತ ಮುಖಂಡನ ಕಾರು
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ