Kannada NewsKarnataka NewsLatest
*ಹಬ್ಬದ ದಿನವೇ ಭಾರಿ ಬೆಂಕಿ ಅವಘಡ; 8 ಮನೆಗಳು ಸುಟ್ಟು ಭಸ್ಮ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಹಬ್ಬದ ದಿನವೇ ರಾಜಧಾನಿ ಬೆಂಗಳೂರಿನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, 8 ಮನೆಗಳು ಬೆಂಕಿಗಾಹುತಿಯಾದ ಘಟನೆ ಚಾಮರಾಜಪೇಟೆಯಲ್ಲಿ ನಡೆದಿದೆ.
ಚಾಮರಾಜಪೇಟೆಯ ಆನಂದಪುರದಲ್ಲಿ ಏಕಾಏಕಿ ಅಗ್ನಿ ಅವಘಡ ಸಂಭವಿಸಿದೆ. ನೋಡ ನೋಡುತ್ತಿದ್ದಂತೆ 8 ಶೀಟ್ ಮನೆಗಳು ಬೆಂಕಿಯ ಕೆನ್ನಾಲಿಗೆಗೆ ಧಗ ಧಗನೆ ಹೊತ್ತಿ ಉರಿದಿವೆ.
ಗೋದಾಮಿನಲ್ಲಿ ಕಾಣಿಸಿಕೊಂಡ ಬೆಂಕಿ ಅಕ್ಕ ಪಕ್ಕದ ಶೀಟ್ ಮನೆಗಳಿಗೆ ವ್ಯಾಪಿಸಿದ್ದು, ಮನೆಗಳು ಸಂಪೂರ್ಣ ಹೊತ್ತಿ ಉರಿದಿವೆ. ಮನೆಯಲ್ಲಿದ್ದವರು ಹೊರಗೋಡಿಬಂದು ಜೀವ ರಕ್ಷಿಸಿಕೊಂಡಿದ್ದಾರೆ.
ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿಯನ್ನು ನಿಯಂತ್ರಿಸಿದ್ದಾರೆ. ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.




