ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜಧಾನಿ ಬೆಂಗಳೂರು ರಾಜ್ಯದ ನಂಬರ್ 1 ಕೊರೊನಾ ಹಾಟ್‍ಸ್ಪಾಟ್ ಆಗಿದ್ದು, ಬೆಂಗಳೂರಿನಲ್ಲಿ ಸೀಲ್‍ಡೌನ್ ಜಾರಿಮಾಡುವ ಸಾಧ್ಯತೆಗಳು ಹೆಚ್ಚಿವೆ.
ಬೆಂಗಳೂರು ನಗರದಲ್ಲಿ ಒಟ್ಟು 68 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, 6000ಕ್ಕೂ ಅಧಿಕ ಮಂದಿಯನ್ನು ಶಂಕಿತರೆಂದು ಗುರುತಿಸಲಾಗಿದೆ. 25 ಸಾವಿರಕ್ಕೂ ಅಧಿಕ ಜನರನ್ನು ಹೋಮ್ ಕ್ವಾರಂಟೈನ್ ಮಾಡಲಾಗಿದ್ದು, ಬಹುತೇಕರ ಪ್ರತ್ಯೇಕ ವಾಸದ ಅವಧಿ ಅಂತ್ಯವಾಗುತ್ತಿದೆ.
ಚೀನಾದಲ್ಲಿ ಗುಣಮುಖವಾದವರಲ್ಲಿಯೂ ಕೊರೊನಾ ಲಕ್ಷಣಗಳು ಕಾಣಿಸಿಕೊಂಡ ಉದಾಹರಣೆಗಳಿವೆ. ಹಾಗಾಗಿ ಕೊರೊನಾ ಹಾಟ್‍ಸ್ಪಾಟ್ ಆಗಿರೂ ಬೆಂಗಳೂರು ಬಹುತೇಕ್ ಸೀಲ್‍ಡೌನ್ ಆಗಲಿದೆ ಎನ್ನಲಾಗುತ್ತಿದೆ.
ಬೆಂಗಳೂರಿನಲ್ಲಿ ಲಾಕ್ ಡೌನ್ ಪಾಲನೆ ಸರಿಯಾಗಿ ಆಗುತ್ತಿಲ್ಲ. ದಿನಸಿ, ಮಟನ್ ಅಂಗಡಿ ಉಚಿತ ಹಾಲು, ಪೋಸ್ಟ್ ಆಫೀಸ್ ಪಡಿತರ ಅಂಗಡಿ ಮಾರ್ಕೆಟ್ ಎಲ್ಲಾ ಕಡೆ ಮುಗಿಬೀಳುತ್ತಿದ್ದಾರೆ. ಅಲ್ಲದೇ 272 ಜನ ನಿಜಾಮುದ್ದೀನ್ ಧಾರ್ಮಿಕ ಕಾರ್ಯಕ್ರಮದಲ್ಲಿ ಬೆಂಗಳೂರಿನಿಂದ ಭಾಗವಹಿಸಿದ್ದರು. ಇದುವರೆಗೂ ಎಲ್ಲರನ್ನು ಪತ್ತೆ ಹಚ್ಚಲು ಸಾಧ್ಯವಾಗಿಲ್ಲ. ಈಗಾಗಲೇ ನಾಲ್ಕು ತಬ್ಲಿಘಿ ಜಮಾತ್ ಪ್ರಕರಣಗಳು ದಾಖಲಾಗಿದೆ. ಹೋಮ್ ಕ್ವಾರಂಟೈನ್ ಒಳಗಾದ ಕೆಲವರು ಮನೆಯಲ್ಲಿರದೇ ಹೊರಗೆ ಓಡಾಡುತ್ತಿರೋದು ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ. ಹೀಗಾಗಿ ಬೆಂಗಳೂರಿನಲ್ಲಿ ಸೀಲ್ ಡೌನ್ ಮಾಡುವುದು ಬಹುತೇಕ ಖಚಿತ ಎನ್ನಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ