
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೊರೊನಾ ಸೋಂಕಿಗೆ ನಿನ್ನೆ ರಾಜಧಾನಿ ಬೆಂಗಳೂರಿನಲ್ಲಿ ಓರ್ವ ವೃದ್ಧ ಬಲಿಯಾಗಿದ್ದು, ಇವರು 77 ಜನರೊಂದಿಗೆ ಸಂಪರ್ಕ ಹೊಂದಿದ್ದರು ಎಂಬ ವಿಚಾರ ಈಗ ಬಹಿರಂಗವಾಗಿದೆ. ಇದು ಬೆಂಗಳೂರಿಗರನ್ನೇ ಬೆಚ್ಚಿ ಬೀಳಿಸಿದ್ದು, ರಾಜಧಾನಿ ಡೇಂಜರ್ ಜೋನ್ ನಲ್ಲಿರುವ ಆತಂಕ ಎದುರಾಗಿದೆ.
ಬೆಂಗಳೂರಿನ ಟಿಪ್ಪು ನಗರದ 68 ವರ್ಷದ ವೃದ್ಧ ನಿನ್ನೆ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದರು. ಇವರು 77ಜನರ ಜತೆಗೆ ಸಂಪರ್ಕದಲ್ಲಿ ಇದ್ದರು ಎಂದು ತಿಳಿದುಬಂದಿದೆ. ಈ ಹಿನ್ನಲೆಯಲ್ಲಿ 77 ಜನರನ್ನೂ ಕ್ವಾರಂಟೈನ್ ಗೆ ಒಳಪಡಿಸಲು ಆರೋಗ್ಯ ಇಲಾಖೆ ಮುಂದಾಗಿದ್ದು, ಈಗಾಗಾಲೇ 66 ಜನರನ್ನು ಕ್ವಾರಂಟೈನ್ ಗೆ ಒಳಪಡಿಸಿ ತಪಾಸಣೆ ನಡೆಸಲಾಗಿದೆ.
ಮೃತ ವೃದ್ಧ ವಾಸವಿರುವ ಮನೆಯ ಸುತ್ತ ಮುತ್ತ ಹಾಗೂ ಇಡೀ ಟಿಪ್ಪು ನಗರದಲ್ಲಿಯೇ ತೀವ್ರ ಕಟ್ಟೆಚ್ಚರ ವಹಿಸಲಾಗಿದ್ದು, ಟಿಪ್ಪುನಗರಕ್ಕೆ ಸಂಪರ್ಕ ಕಲ್ಪಿಸುವ ಎಲ್ಲಾ ರಸ್ತೆಗಳನ್ನು ಬಿಬಿಎಂಪಿ ಅಧಿಕಾರಿಗಳು ಸಂಪೂರ್ಣ ಬಂದ್ ಮಾಡಿದ್ದು, ಲಾಕ್ ಡೌನ್ ನನ್ನು ಇನ್ನಷ್ಟು ಕಠಿಣಗೊಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ