ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸ್ಥಿತಿ ಕೇಳುವವರಿಲ್ಲದಂತಾಗಿದೆ. ಒಂದೆಡೆ ಆಸ್ಪತ್ರೆಗಳಿಗೆ ಅಲೆದಾಡಿದರೂ ಬೆಡ್ ಸಿಗುತ್ತಿಲ್ಲ, ಇನ್ನೊಂದೆಡೆ ಸಾವನ್ನಪ್ಪಿದರೆ ಚಿತಾಗಾರವೂ ಸಿಗದ ಘೋರ ಪರಿಸ್ಥಿತಿ ಎದುರಾಗಿದೆ. ಆಸ್ಪತ್ರೆಗಳಲ್ಲಿ ವೆಂಟಿಲೇಟರ್ ಬೆಡ್ ಸಿಗದ ಕಾರಣ ಸೋಂಕಿತ ಮಹಿಳೆಯೊಬ್ಬರು ಆಂಬುಲೆನ್ಸ್ ನಲ್ಲಿ ವಿಧಾನಸೌಧಕ್ಕೆ ಆಗಮಿಸಿರುವ ಘಟನೆ ನಡೆದಿದೆ.
ಮಹಿಳೆಯೊಬ್ಬರು ಕೊರೊನಾ ಸೋಂಕಿನಿಂದ ಬಳಲುತ್ತಿದ್ದು, ಕಳೆದ ಎರಡುದಿನಗಳಿಂದ ಬೆಂಗಳೂರಿನ ಎಲ್ಲಾ ಆಸ್ಪತ್ರೆಗಳಿಗೂ ಅಲೆದಾಡಿದರೂ ಬೆಡ್ ವ್ಯವಸ್ಥೆ ಸಿಕ್ಕಿಲ್ಲ. ಇದರಿಂದ ಬೇಸತ್ತ ಕುಟುಂಬದವರು ಸೋಂಕಿತ ಮಹಿಳೆಯನ್ನು ಆಂಬುಲೆನ್ಸ್ ಮೂಲಕ ವಿಧಾನಸೌಧಕ್ಕೇ ಕರೆತಂದಿದ್ದಾರೆ.
ಬೆಡ್ ವ್ಯವಸ್ಥೆ ಮಾಡಿಸುವಂತೆ ವಿಧಾನಸೌಧದ ಮುಂದೆ ಕುಳಿತು ಧರಣಿ ನಡೆಸಿದ್ದಾರೆ. ಎರಡು ದಿನದಿಂದ ಬೆಡ್ ಗಾಗಿ ಪರದಾಡುತ್ತಿದ್ದೇವೆ ಮಹಿಳೆಯ ಸ್ಥಿತಿ ಗಂಭೀರವಾಗಿದೆ. ಆಸ್ಪತ್ರೆಯಲ್ಲಿ ಬೆಡ್ ವ್ಯವಸ್ಥೆ ಮಾಡಿಸಿಕೊಡುವಂತೆ ಕುಟುಂಬಸ್ಥರು ಕಣ್ಣೀರಿಟ್ಟಿದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆ ಎಚ್ಚೆತ್ತ ಪೊಲಿಸರು ವಿಕ್ಟೋರಿಯಾ ಆಸ್ಪತ್ರೆಗೆ ಕರೆ ಮಾಡಿ ಬೆಡ್ ವ್ಯವಸ್ಥೆ ಮಾಡಿಸಿ, ಸೋಂಕಿತ ಮಹಿಳೆಯನ್ನು ಆಸ್ಪತ್ರೆಗೆ ಕಳುಹಿಸಿದ್ದಾರೆ.
ಲಾಕ್ ಡೌನ್ ಜಾರಿ ಮಾಡಿದ ಕೇರಳ ಸರ್ಕಾರ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ