ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತಾರ ಸಂಖ್ಯೆ ಹೆಚ್ಚುತ್ತಿದ್ದು, ಇಂದು ರಾಜಧಾನಿ ಬೆಂಗಳೂರಿನಲ್ಲಿ ಕೊರೊನ ಸೋಂಕಿಗೆ 76 ವರ್ಷದ ವೃದ್ಧ ಬಲಿಯಾಗಿದ್ದಾರೆ. ಈ ಮೂಲಕ ಕರ್ನಾಟಕದಲ್ಲಿ ಕೊರೊನಾ ವೈರಸ್ ಗೆ ಬಲಿಯಾದವರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.
ಮಾರ್ಚ್ 12ರಂದು ಮೃತ ವೃದ್ಧನಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಈ ಹಿನ್ನಲೆಯಲ್ಲಿ ಅವರನ್ನು ಪ್ರತ್ಯೇಕವಾಗಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೇ ಇಂದು ಸಾವನ್ನಪ್ಪಿದ್ದಾರೆ.
ರಾಜ್ಯದಲ್ಲಿ ಇಂದು ಒಂದೇ ದಿನದಲ್ಲಿ 13 ಹೊಸ ಕೊರೊನಾ ಪ್ರಕರಣ ಪತ್ತೆಯಾಗಿದೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 260ಕ್ಕೆ ಏರಿಕೆಯಾದಂತಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ