ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೋರ್ವ ಕರೊನಾ ವಾರಿಯರ್ ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ಒಂದೇ ವಾರದಲ್ಲಿ ಇಬ್ಬರು ಕೊರೊನಾ ವಾರಿಯರ್ ಗಳು ಬಲಿಯಾಗಿದ್ದಾರೆ.
ಬೆಂಗಳೂರಿನ ಕಲಾಸಿಪಾಳ್ಯ ಠಾಣೆಯ 56 ವರ್ಷದ ಹೆಡ್ ಕಾನ್ ಸ್ಟೇಬಲ್ ಕೊರೊನಾ ಸೋಂಕಿಗೆ ಇಂದು ಸಾವನ್ನಪ್ಪಿದ್ದಾರೆ. ಮೂರು ದಿನಗಳ ಹಿಂದೆ ಠಾಣೆಯ 9 ಸಿಬ್ಬಂದಿಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿತ್ತು. ಇವರಲ್ಲಿ ಓರ್ವ ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಇದರಿಂದ ಪೊಲೀಸರಲ್ಲಿ ಆತಂಕ ಹೆಚ್ಚಿದೆ.
ಇನ್ನು ಬೆಂಗಳೂರಿನ ವಿವಿ ಪುರಂ ಪೊಲೀಸ್ ಠಾಣೆಯ ಟ್ರಾಫಿಕ್ ಹೆಡ್ ಕಾನ್ಸ್ ಟೇಬಲ್ ಗೂ ಇಂದು ಕೊರೊನಾ ಪಾಸಿಟೀವ್ ಬಂದಿದೆ. ಅಲ್ಲದೇ ವಿಲ್ಸನ್ ಗಾರ್ಡನ್ ಎ ಎಸ್ ಐ ಅವರಿಗೂ ಕೊರೊನಾ ಸೋಂಕು ಪತ್ತೆಯಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ