Latest

ಒಂದೇ ಅಪಾರ್ಟ್ ಮೆಂಟ್ ನ 72 ಮನೆ ಸೀಲ್ ಡೌನ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಮೂರನೇ ಅಲೆ ಭೀತಿ ಆರಂಭವಾಗಿದ್ದು, ಏಕಾಏಕಿ ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ಅದರಲ್ಲೂ ಅಪಾರ್ಟ್ ಮೆಂಟ್ ಮನೆಗಳಲ್ಲಿ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು, ಸೀಲ್ ಡೌನ್ ಜಾರಿ ಮಾಡಲಾಗಿದೆ.

ಬೆಂಗಳೂರಿನಲ್ಲಿ ಮೂರನೇ ಅಲೆ ಮುನ್ಸೂಚನೆ ಹಿನ್ನೆಲೆಯಲ್ಲಿ ಒಂದೇ ಮನೆಯಲ್ಲಿ ಮೂವರಲ್ಲಿ ಸೋಂಕು ಪತ್ತೆಯಾದರೆ ಇಡೀ ಅಪಾರ್ಟ್ ಮೆಂಟ್ ಸೀಲ್ ಡೌನ್ ಮಾಡಲಾಗುತ್ತಿದೆ. ಸೋಂಕಿತರು ಇರುವ ಏರಿಯಾಗಳಲ್ಲಿ ಜನರು ಓಡಾಟ ನಡೆಸದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದ್ದು, ವೈರಸ್ ಹರಡದಂತೆ ಮುಂಜಾಗೃತೆ ವಹಿಸಲಾಗುತ್ತಿದೆ ಎಂದು ಬಿಬಿಎಂಪಿ ವಿಶೇಷ ಆಯುಕ್ತ ರಂದೀಪ್ ತಿಳಿಸಿದ್ದಾರೆ.

ಬೆಂಗಳೂರಿನ ಯಲಹಂಕದ ಸುರಭಿ ಲೆಔಟ್ ನಲ್ಲಿರುವ ಒಂದೇ ಮನೆಯಲ್ಲಿರುವ 5 ಜನರಲ್ಲಿ ಸೋಂಕು ದೃಢವಾಗಿದ್ದು, ಮನೆಯನ್ನು ಸೀಲ್ ಡೌನ್ ಮಾಡಲಾಗಿದೆ. ಇನ್ನು ಯಶವಂತಪುರದ ಬೆಲ್ ಅಪಾರ್ಟ್ ಮೆಂಟ್ ನಲ್ಲಿ 16 ಜನರಲ್ಲಿ ಸೋಂಕು ಪತ್ತೆಯಾಗಿದ್ದು ಇಡೀ ಎ ಬ್ಲಾಕ್ ನ್ನು ಸೀಲ್ ಡೌನ್ ಮಾಡಲಾಗಿದೆ. 72 ಮನೆಗಳ 300 ಜನರನ್ನು ಹೋಂ ಐಸೋಲೇಷನ್ ಮಾಡಲಾಗಿದೆ. ಧಾರವಾಡ ಹಾಗೂ ದೆಹಲಿಯಿಂದ ವಾಪಸ್ ಆದವರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಬೆಂಗಳೂರಿನಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕಾದ ಅಗತ್ಯವಿದೆ ಎಂದು ಮಾಹಿತಿ ನೀಡಿದ್ದಾರೆ.

ಕೊವಿಡ್ ಹೊಸ ಮಾರ್ಗಸೂಚಿ ಬಿಡುಗಡೆ: ಇಂದಿನಿಂದಲೇ ಜಾರಿ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button