
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಗಣನೀಯವಾಗಿ ಹೆಚ್ಚುತ್ತಿದ್ದು, ಆಸ್ಪತ್ರೆಗಳಲ್ಲಿ ಸೋಂಕಿತರಿಗೆ ಬೆಡ್ ಕೂಡ ಸಿಗದ ದುಸ್ಥಿತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ನಿರ್ದೇಶನದಂತೆ ಕಂದಾಯ ಸಚಿವ ಆರ್.ಅಶೋಕ್ ನೇತೃತ್ವದಲ್ಲಿ ಮಹತ್ವದ ಸಭೆ ಕರೆಯಲಾಗಿದೆ.
ಸೋಮವಾರ ಮಧ್ಯಾಹ್ನ 3 ಗಂಟೆಗೆ ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ ಸಚಿವ ಆರ್.ಅಶೋಕ್ ನೇತೃತ್ವದಲ್ಲಿ ಬೆಂಗಳೂರು ಮಹಾನಗರದ ಎಲ್ಲಾ ಶಾಸಕರು, ಸಂಸದರು, ರಾಜ್ಯ ಸಭಾ ಸದಸ್ಯರು ಹಾಗೂ ಸಚಿವರುಗಳ ಆಪ್ತ ಕಾರ್ಯದರ್ಶಿಗಳು, ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಲಿದ್ದಾರೆ.
ಕ್ವಾರಂಟೈನ್ ಆದ ಡಿಸಿಎಂ ಲಕ್ಷ್ಮಣ ಸವದಿ