Wanted Tailor2
Cancer Hospital 2
Bottom Add. 3

*ನಿಫಾ ಭೀತಿ ನಡುವೆ ರಾಜ್ಯದಲ್ಲಿ ಹೆಚ್ಚುತ್ತಿದೆ ಡೆಂಗ್ಯೂ ಪ್ರಕರಣ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಪಕ್ಕದ ರಾಜ್ಯ ಕೇರಳದಲ್ಲಿ ನಿಫಾ ವೈರಸ್ ಪ್ರಕರಣ ಹೆಚ್ಚುತ್ತಿರುವ ಬೆನ್ನಲ್ಲೇ ಕರ್ನಾಟಕದಲ್ಲಿಯೂ ಹೈ ಅಲರ್ಟ್ ಘೋಷಣೆ ಮಾಡಲಾಗಿದ್ದು, ಆರೋಗ್ಯ ಇಲಾಖೆಯಿಂದ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ನಡುವೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ.

ಈ ವರ್ಷ ರಾಜ್ಯದಲ್ಲಿ ಪತ್ತೆಯಾದ ಡೆಂಗ್ಯೂ ಪ್ರಕರಣಗಳಲ್ಲಿ ಅತಿ ಹೆಚ್ಚು ಪ್ರಕರಣ ಬೆಂಗಳೂರಿನ ಬಿಬಿಎಂಪಿ ವ್ಯಾಪ್ತಿಯಲ್ಲಿ ಪತ್ತೆಯಾಗಿದೆ. ಆಗಸ್ಟ್ ನಲ್ಲಿ ಬೆಂಗಳೂರಿನಲ್ಲಿ 2,374 ಡೆಂಗ್ಯೂ ಪ್ರಕರಣ ಪತ್ತೆಯಾಗಿತ್ತು. ಸೆಪ್ಟೆಂಬರ್ 1ರಿಂದ ಸೆ.20ರವರೆಗೆ 2,182 ಪ್ರಕರಣಗಳು ಪತ್ತೆಯಾಗಿವೆ. ಅಂದರೆ ಸರಾಸರಿ ಪ್ರತಿದಿನ 77ರಿಂದ 190 ಜನರಲ್ಲಿ ಡೆಂಗ್ಯೂ ಪತ್ತೆಯಾಗುತ್ತಿವೆ.

ಬೆಂಗಳೂರು ಪೂರ್ವ, ಬೆಂಗಳೂರು ದಕ್ಷಿಣ ಹಾಗೂ ಮಹದೇವಪುರ ವಲಯಗಳಲ್ಲಿ ಅತಿ ಹೆಚ್ಚು ಡೆಂಗ್ಯೂ ಕೇಸ್ ಪತ್ತೆಯಾಗಿದೆ. ಆರೋಗ್ಯ ಇಲಾಖೆ ಅಂಕಿ ಅಂಶಗಳ ಪ್ರಕಾರ ರಾಜ್ಯದಲ್ಲಿ ಜನವರಿ 1ರಿಂದ ಸೆ.19ರವರೆಗೆ 9,208 ಡೆಂಗ್ಯೂ ಪ್ರಕರಣ ಪತ್ತೆಯಾಗಿದ್ದು, ಅದರಲ್ಲಿ 5,220 ಪ್ರಕರಣಗಳು ಬಿಬಿಎಂಪಿ ವ್ಯಾಪ್ತಿಯಲ್ಲಿ ಪತ್ತೆಯಾಗಿದೆ. ಮೈಸೂರು ಹಾಗೂ ಉಡುಪಿ ಜಿಲ್ಲೆಗಳು ಡೆಂಗ್ಯೂ ಕೇಸ್ ಹೆಚ್ಚು ಪತ್ತೆ ಪ್ರಕರಣದಲ್ಲಿ ಎರಡು ಹಾಗೂ ಮೂರನೇ ಸ್ಥಾನದಲ್ಲಿವೆ.


Bottom Add3
Bottom Ad 2

You cannot copy content of this page