Latest

ಫ್ಲೈಓವರ್ ಮೇಲಿಂದ ಹಾರಿ ಬಿದ್ದು ಯುವಕ-ಯುವತಿ ದುರ್ಮರಣ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಭೀಕರ ಅಪಘಾತ ಸಂಭವಿಸಿದ್ದು, ಅಪಘಾತದ ರಭಸಕ್ಕೆ ಬೈಕ್ ನಲ್ಲಿದ್ದ ಯುವಕ-ಯುವತಿ ಫ್ಲೈಓವರ್ ಮೇಲಿದ್ದು ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ.

ಬೈಕ್ ನಲ್ಲಿ ಬರುತ್ತಿದ್ದ ಯುವಕ-ಯುವತಿ ಫ್ಲೈಓವರ್ ಮೇಲೆ ಬೈಕ್ ನಿಲ್ಲಿಸಲು ಮುಂದಾಗಿದ್ದಾರೆ. ಈ ವೇಳೆ 120ಕಿ.ಮೀ ವೇಗದಲ್ಲಿ ಬಂದ ಕಾರು ಬೈಕಿಗೆ ಡಿಕ್ಕಿಹೊಡೆದಿದೆ. ಪರಿಣಾಮ ಬೈಕ್ ನಲ್ಲಿದ್ದ ಯುವಕ-ಯುವತಿ ಫೈಓವರ್ ಮೇಲಿಂದ ಕೆಳಗೆ ಸರ್ವಿಸ್ ರಸ್ತೆಗೆ ಬಿದ್ದಿದ್ದಾರೆ.

ಕಾರು ಗುದ್ದಿದ ರಭಸಕ್ಕೆ ಫ್ಲೈಓವರ್ ಗೋಡೆ ಮುರಿದು ಬಿದ್ದಿದ್ದು, ಯುವಕ ಹಾಗೂ ಯುವತಿಯ ದೇಹ ಛಿದ್ರ ಛಿದ್ರಗೊಂಡಿದೆ. ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಕಾರು ಚಾಲಕ ಕೂಡ ಗಂಭೀರವಾಗಿ ಗಾಯಗೊಂಡಿದ್ದಾನೆ.

ಈ ಭೀಕರ ರಸ್ತೆ ಅಪಘಾತದ ದೃಶ್ಯ ಶಿಸಿ ಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಸ್ಥಳಕ್ಕೆ ಪರಪ್ಪನ ಅಗ್ರಹಾರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಡಿ.ಕೆ.ಶಿವಕುಮಾರ್ ವಿರುದ್ಧ ವಾರಂಟ್ ಜಾರಿ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button