Latest

ಖೋಟಾನೋಟು ಸಾಗಣೆ; ನಾಲ್ವರ ಬಂಧನ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಖೋಟಾನೋಟು ಮಾರಾಟಕ್ಕೆ ಯತ್ನಿಸುತ್ತಿದ್ದ ನಾಲ್ವರನ್ನು ಬೆಂಗಳೂರು ಎಲೆಕ್ಟ್ರಾನಿಕ್ ಸಿಟಿ ಪೊಲಿಸರು ಬಂಧಿಸಿದ್ದಾರೆ.

ಬಂಧಿತರನ್ನು ಶಿವ, ನಾಗೇಂದ್ರ, ಪ್ರಕಾಶ್ ಹಾಗೂ ಲಕ್ಷ್ಮಣ ಎಂದು ಗುರುತಿಸಲಾಗಿದೆ. ಇವರು ಸ್ವಿಫ್ಟ್ ಕಾರಿನಲ್ಲಿ ಲಕ್ಷಾಂತರ ರೂ ಖೋಟಾನೋಟು ಸಾಗಾಟ ಮಾಡುತ್ತಿದ್ದರು.

ಬಂಧಿತ ಆರೋಪಿಗಳಿಂದ 6.80 ಲಕ್ಷ ರೂ ಮೌಲ್ಯದ 2000 ರೂ ಮುಖಬೆಲೆಯ ನೋಟುಗಳನ್ನು ವಶಕ್ಕೆ ಪಡೆಯಲಾಗಿದೆ.

Related Articles

Back to top button