ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಇತ್ತೀಚೆಗೆ ಸುರುದ ಭಾರಿ ಮಳೆಯಿಂದ ಉಂಟಾದ ಪ್ರವಾಹ ಪರಿಸ್ಥಿತಿ ಪ್ರಕರಣ ಇದೀಗ ಲೋಕಾಯುಕ್ತ ಮೆಟ್ಟಿಲೇರಿದೆ.
ರಾಜಕಾಲುವೆಗಳ ಒತ್ತುವರಿಯೇ ಪ್ರವಾಹಕ್ಕೆ ಕಾರಣ ಎಂದು ಒಂದೆಡೆ ಬಿಬಿಎಂಪಿ ಅಧಿಕಾರಿಗಳು ಒತ್ತುವರಿ ತೆರವು ಕಾರ್ಯಾಚಾರಣೆ ನಡೆಸುತ್ತಿದ್ದಾರೆ. ಆದರೆ ಮತ್ತೊಂದೆಡೆ ಮಳೆ ಅವಾಂತರ ಪ್ರಕರಣದ ಬಗ್ಗೆ ಲೋಕಾಯುಕ್ತದಲ್ಲಿ ದೂರು ದಾಖಲಾಗಿದೆ.
ಅವಾಂತರಕ್ಕೆ ಕಾರಣರಾದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಒತ್ತಾಯಿಸಿ ಶ್ರೀರಾಮ್ ನಾಯಕ್ ಎಂಬುವವರು ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಮಳೆ ನೀರು ಹರಿಯುವ ಚರಂಡಿಗಳು ಅತಿಕ್ರಮಣಗೊಂಡಿವೆ. ಕೆರೆಗಳು ಹಾಗೂ ಕೆರೆಗಳ ತಳದಲ್ಲಿ ಕಟ್ಟಡ ನಿರ್ಮಿಸಲು ಅನುಮತಿ ನೀಡಿರುವ ಅಧಿಕಾರಿಗಳ ವಿರುದ್ಧ ಸುಮೋಟೋ ಕ್ರಮಕ್ಕೆ ಶ್ರೀರಾಮ್ ಮನವಿ ಮಾಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ