ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ನಡೆದಿದ್ದ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಜಯ್ ನಗರ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.
ಬೆಂಗಳೂರಿನಲ್ಲಿ ಮಾರ್ಚ್ 24ರಂದು ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿತ್ತು. ಯುವತಿ ನೀಡಿದ ದೂರು ಆಧರಿಸಿ ಇದೀಗ ನಾಲ್ವರು ರಾಷ್ಟ್ರಮಟ್ಟದ ಈಜುಪಟುಗಳನ್ನು ಪೊಲೀಸರು ಬಂಧಿಸಿದ್ದಾರೆ. ರಜತ್, ಶಿವ್ ರಾಣಾ, ದೇವ್ ಸರೋಯಿ ಹಾಗೂ ಯೋಗೇಶ್ ಬಂಧಿತ ಆರೋಪಿಗಳು.
ಬಂಧಿತ ನಾಲ್ವರು ದೆಹಲಿ ಮೂಲದವರಾಗಿದ್ದು, ರಾಷ್ಟ್ರ ಮಟ್ಟದ ಈಜುಪಟುಗಳಾಗಿದ್ದಾರೆ. ಪ್ರ್ಯಾಕ್ಟೀಸ್ ಗಾಗಿ ಬೆಂಗಳೂರಿನಲ್ಲಿ ತಂಗಿದ್ದರು. ಬೆಂಗಳೂರಿನಲ್ಲಿ ನರ್ಸ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಪಶ್ಚಿಮ ಬಂಗಾಳ ಮೂಲದ ಯುವತಿಯನ್ನು ಪರಿಚಯಿಸಿಕೊಂಡಿದ್ದ ಆರೋಪಿ ರಜತ್, ಆಕೆಯನ್ನು ಹೋಟೆಲ್ ಗೆ ಕರೆದೊಯ್ದಿದ್ದ. ಬಳಿಕ ತಡ ರಾತ್ರಿ ಆಕೆಯನ್ನು ರೂಮ್ ಗೆ ಕರೆದೊಯ್ದಿದ್ದ. ಅಲ್ಲಿ ರಜತ್ ಹಾಗೂ ಆತನ ಮೂವರು ಸ್ನೇಹಿತರು ಯುವತಿಯನ್ನು ಬೆದರಿಸಿ ಸಾಮೂಹಿಕ ಅತ್ಯಾಚಾರ ನಡೆಸಿದ್ದರು.
ಸಂತ್ರಸ್ತ ಯುವತಿ ಸಂಜಯ್ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಳು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.
ಶಂಕ್ರಣ್ಣ ಆತ್ಮಹತ್ಯೆ ಪ್ರಕರಣ; ಅತ್ತೆ-ಸೊಸೆ ಜಗಳವೇ ಸಾವಿಗೆ ಕಾರಣವಾಯ್ತಾ?
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ