ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಬೆಂಕಿ ಅವಘಡ ಸಂಭವಿಸಿದ್ದು, ಹೆಚ್ ಎಸ್ ಆರ್ ಲೇಔಟ್ ನಲ್ಲಿರುವ ಹ್ಯಾಂಗ್ ಓವರ್ ಪಬ್ ನಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದಿದೆ. ಬೆಂಕಿಯ ತೀವ್ರತೆಗೆ ಕಟ್ಟಡ ಧಗಧಗನೆ ಹೊತ್ತಿ ಉರಿದಿದೆ.
ಮಧ್ಯಾಹ್ನದ ವೇಳೆ ಪಬ್ ಏಕಾಏಕಿ ಹೊತ್ತಿ ಉರಿಯಲು ಆರಂಭವಾಗಿದೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಬೆಂಕಿ ಅವಘಡ ಸಂಭವಿಸುತ್ತಿದ್ದಂತೆಯೇ ಜನರು ಪಬ್ ನಿಂದ ಹೊರಗೋಡಿ ಬಂದಿದ್ದಾರೆ.
ತಕ್ಷಣ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ