Latest

ಮತ್ತೆ ಎರಡು ದಿನ ಭಾರಿ ಮಳೆ; ಬೆಂಗಳೂರಿನಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಇತಿಹಾಸದಲ್ಲಿಯೇ ಕಂಡು ಕೇಳರಿಯದ ರೀತಿಯಲ್ಲಿ ದಾಖಲೆ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಸಿಲಿಕಾನ್ ಸಿಟಿ ಜನಜೀವನ ಅಯೋಮಯವಾಗಿದೆ. ಈ ಮಧ್ಯೆ ಇನ್ನೂ ಎರಡು ದಿನಗಳ ಕಾಲ ಬೆಂಗಳೂರಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಣ ಮಳೆಯಿಂದಾಗಿ ಬೆಂಗಳೂರಿನಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ತಗ್ಗು ಪ್ರದೇಶಗಳು, ಮನೆ ರಸ್ತೆಗಳು, ಐಟಿ ಕಂಪನಿಗಳು, ವಿಧಾನಸೌಧದ ಕ್ಯಾಂಟೀನ್ ಕೂಡ ಜಲಾವೃತಗೊಂಡಿದೆ. ಮನೆಗಳಿಗೆ ನೀರು ನುಗ್ಗಿದ್ದು ಬಡಾವಣೆಗಳು ಮುಳುಗಡೆಯಾಗಿವೆ, ಮನೆ ಮುಂದೆ ನಿಂತಿರುವ ವಾಹನಗಳು ನೀರಿನ ರಭಸಕ್ಕೆ ಕೊಚ್ಚಿ ಹೋಗುತ್ತಿವೆ.

ವರ್ತೂರು ಕೆರೆ ತುಂಬಿ ಹರಿದಿದ್ದು ವರುಣಾರ್ಭಟಕ್ಕೆ ವೈಟ್ ಫೀಲ್ಡ್ ಬಳಿ ಸಂಪೂರ್ಣ ಜಲಾವೃತಗೊಂಡಿದೆ. ಬೆಂಗಳೂರಿನ ಔಟರ್ ರಿಂಗ್ ರೋಡ್ ರಸ್ತೆಗಳು ನೀರಿನಿಂದ ತುಂಬಿದ್ದು, ಜನಸಂಚಾರ, ವಾಹನ ಸಂಚಾರ ಅಸಾಧ್ಯವಾಗಿದೆ. ಈ ಹಿನ್ನೆಲೆಯಲ್ಲಿ 50ಕ್ಕೂ ಹೆಚ್ಚು ಕಂಪನಿಗಳು ನೌಕರರಿಗೆ ವರ್ಕ್ ಫ್ರಂ ಹೋಂ ಕೆಲಸಕ್ಕೆ ಸೂಚಿಸಿವೆ.

ಭಾರಿ ಮಳೆಯಿಂದಾಗಿ ಆನೇಕಲ್ ಬಳಿ ಸಂಚಾರ ಸ್ಥಗಿತಗೊಂಡಿದ್ದು, ಬೆಂಗಳೂರು-ಚೆನ್ನೈ ಹೆದ್ದಾರಿ ಬಂದ್ ಆಗಿದೆ. ಎಲೆಕ್ಟ್ರಾನಿಕ್ ಸಿಟಿ ಬಳಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು ಬೆಂಗಳೂರಿನಿಂದ ತಮಿಳುನಾಡು ಕಡೆ ಪ್ರಯಾಣಿಸುವ ಪ್ರಯಾಣಿಕರಿಗೆ ಸಮಸ್ಯೆಯಾಗಿದೆ.

ಸರ್ಜಾಪುರ ರಸ್ತೆಯ ದಿ ಕಂಟ್ರಿಸೈಡ್ ಅಪಾರ್ಟ್ ಮೆಂಟ್ ಗೆ ಮಳೆ ನೀರು ನುಗ್ಗಿದ್ದು, ಐದು ಅಡಿಗಳಷ್ಟು ನೀರು ನಿಂತಿದೆ. ರೈನ್ ಬ್ರೂ ಡೈವ್ ಬಡಾವಣೆ ಸಂಪೂರ್ಣ ಜಲಾವೃತಗೊಂಡಿದೆ. ಯಮಲೂರಿನಲ್ಲಿ ರಸ್ತೆಗಳು ಮುಳುಗಡೆಯಾಗಿದ್ದು, ರಸ್ತೆಯಲ್ಲಿಯೇ ಬೋಟ್ ಗಳನ್ನು ಇಳಿಸಿ ಜನರನ್ನು ಸ್ಥಳಾಂತರಿಸುವ ಕೆಲಸ ನಡೆದಿದೆ. ಈ ನಡುವೆ ಬೆಂಗಳೂರಿನಲ್ಲಿ ಇನ್ನೂ ಎರಡು ದಿನ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವುದು ರಾಜಧಾನಿ ಜನರು ಕಂಗೆಟ್ಟು ಹೋಗಿದ್ದಾರೆ.
ಇತಿಹಾಸದಲ್ಲಿ ಕಂಡರಿಯದ ರೌದ್ರಾವತಾರತಾಳಿದ ಮಳೆ; ಬೆಂಗಳೂರಿನಲ್ಲಿ ಜನಜೀವನ ಸಂಪೂರ್ಣ ಅಸ್ತವ್ಯಸ್ಥ; ಸರಣಿ ಟ್ವೀಟ್ ಮಾಡಿ ಸಚಿವರು ಹೇಳಿದ್ದೇನು?

https://pragati.taskdun.com/politics/dr-sudhakartweetbangalore-rain/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button