ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಅಶ್ಲೀಲ ವಿಡಿಯೋ ವೀಕ್ಷಣೆ, ಪೋರ್ನ್ ಸೈಟ್ ಚಾಟಿಂಗ್ ಚಟಕ್ಕೆ ಬಿದ್ದಿದ್ದ ಪತಿ ಮಹಶಾಯನ ಕಿರುಕುಳಕ್ಕೆ ಬೇಸತ್ತ ಪತ್ನಿ ಕೋರ್ಟ್ ಮೆಟ್ಟಿಲೇರಿದ ಘಟನೆ ಬೆಂಗಳೂರಿನ ಬಸವನಗುಡಿಯಲ್ಲಿ ನಡೆದಿದೆ.
ಪೋರ್ನ್ ಸೈಟ್, ವೇಶ್ಯೆಯರ ಜೊತೆ ಚಾಟಿಂಗ್ ಮಾಡುವುದನ್ನು ಪ್ರಶ್ನಿಸಿದ್ದ ಪತಿಗೆ ಕಿರುಕುಳ ನೀಡಿ ಹಿಂಸೆ ನೀಡುತ್ತಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಪತ್ನಿ 1ನೇ ಹೆಚ್ಚುವರಿ ಮ್ಯಾಜಿಸ್ಟ್ರೇಟ್ ಕೋರ್ಟ್ ಮೆಟ್ಟಿಲೇರಿದ್ದು, ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿ ಪತಿ ವಿರುದ್ಧ ಎಫ್ ಐ ಆರ್ ದಾಖಲಿಸಿ ತನಿಖೆ ನಡೆಸುವಂತೆ ಬಸವನಗುಡಿ ಮಹಿಳಾ ಪೊಲೀಸ್ ಠಾಣೆಗೆ ನಿರ್ದೇಶನ ನೀಡಿದೆ.
ಆರೋಪಿ ಪತಿ ಶ್ರೀನಿವಾಸ್ ಎಂಬಾತ ಪ್ರತಿದಿನ ಪೋರ್ನ್ ವಿಡಿಯೋ ವೀಕ್ಷಣೆಯಲ್ಲಿ ನಿರತನಾಗಿರುತ್ತಿದ್ದ ಬರಬರುತ್ತಾ ಅಶ್ಲೀಲ ವೆಬ್ ಸೈಟ್ ಗಳಲ್ಲಿ ಯುವತಿಯರೊಂದಿಗೆ ಲೈವ್ ವಿಡಿಯೋ ದುಶ್ಚಟಕ್ಕೆ ಬಿದ್ದಿದ್ದ. ಇದನ್ನು ಪ್ರಶ್ನಿಸಿದ್ದಕ್ಕೆ ಕಿರುಕುಳ ನೀಡುತಿದ್ದನಲ್ಲದೇ, ಹೆಂಡತಿಯನ್ನೇ ತಿರಸ್ಕರಿಸಿ ತಾನು ವಿಚ್ಛೇದಿತ ಎಂದು ಪೋಸ್ಟ್ ಹಾಕಿಕೊಂಡಿದ್ದ ಎಂದು ಪತ್ನಿ ದೂರಿದ್ದಾಳೆ. ಈ ಬಗ್ಗೆ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ನೀಡಲು ಪತ್ನಿ ಮುಂದಾದಾಗ ಕೇಸ್ ದಾಖಲಿಸಲು ನಿರಾಕರಿಸಿದ ಪೊಲೀಸರು, ಕೇವಲ ಚಾಟಿಂಗ್, ಅಶ್ಲೀಲ ವಿಡಿಯೋ ನೋಡಿದ್ದಕ್ಕೆ ಪ್ರಕರಣ ದಾಖಲಿಸಲಾಗದು ಎಂದಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಮಹಿಳೆ ಕೋರ್ಟ್ ಮೆಟ್ಟಿಲೇರಿದ್ದಾರೆ. ವಿಚಾರಣೆ ನಡೆಸಿದ ನ್ಯಾಯಾಲಯ ಪತಿ ವಿರುದ್ಧ ಪ್ರಕರಣ ದಾಖಲಿಸಿ, ತನಿಖೆ ನಡೆಸುವಂತೆ ಸೂಚನೆ ನೀಡಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ