Latest

ಲಾಕ್ ಡೌನ್ ಕುರಿತು ಸಚಿವ ಆರ್.ಅಶೋಕ್ ಸ್ಪಷ್ಟನೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕೊರೊನಾ ನಿಯಂತ್ರಣಕ್ಕೆ ಕಠಿಣ ನಿಯಮಗಳನ್ನು ಜಾರಿ ಮಾಡಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸಚಿವರ ಸಭೆ ಬಳಿಕ ಅಮತನಾಡಿದ ಅವರು, ಲಾಕ್ ಡೌನ್ ಜಾರಿ ಪ್ರಶೆ ಇಲ್ಲ. ಆದರೆ ಟಫ್ ರೂಲ್ಸ್ ಜಾರಿ ಮಾಡಲಾಗುವುದು. ಅದರಲ್ಲೂ ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ ಮಿತಿಮೀರುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಕಠಿಣ ನಿಯಮ ಜಾರಿ ಅಗತ್ಯವಿದೆ. ಬಡವರಿಗೆ ತೊಂದರೆಯಾಗದಂತೆ ನಿಯಮ ಜಾರಿ ತರಲಾಗುತ್ತದೆ ಎಂದರು.

ನಾಳೆ ಸರ್ವಪಕ್ಷ ಸಭೆ ನಡೆಯಲಿದ್ದು, ಅದಕ್ಕೆ ಪೂರಕವಾಗಿ ಇಂದು ಸಚಿವರ ಸಭೆ ನಡೆದಿದೆ. ಸಭೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲಾಯಿತು. ನಾಳಿನ ಸಭೆಯಲ್ಲಿಯೂ ಈ ಬಗ್ಗೆ ಚರ್ಚಿಸಿ, ಎಲ್ಲಾ ಪಕ್ಷಗಳ ನಾಯಕರ ಅಭಿಪ್ರಾಯ ಸಂಗ್ರಹಿಸಿ ಸಿಎಂ ಗೆ ತಿಳಿಸುತ್ತೇವೆ. ಮಂಗಳವಾರ ಮುಖ್ಯಮಂತ್ರಿಗಳು ಕಠಿನ ನಿಯಮದ ಬಗ್ಗೆ ಆದೇಶ ಹೊರಡಿಸಲಿದ್ದಾರೆ ಎಂದು ಹೇಳಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button