Latest

ಹಾಡಹಗಲೇ ನಡುರಸ್ತೆಯಲ್ಲಿ ಮತ್ತೊಂದು ಭೀಕರ ಹತ್ಯೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಅಪರಾಧ ಪ್ರಕರಣಗಳು ಹೆಚ್ಚುತ್ತಿದ್ದು, ಆತಂಕದ ವಾತಾವರಣ ನಿರ್ಮಾಣವಾಗುತ್ತಿದೆ. ದುಷ್ಕರ್ಮಿಗಳು ವ್ಯಕ್ತಿಯೋರ್ವನನ್ನು ಹಾಡಹಗಲೇ ನಡು ರಸ್ತೆಯಲ್ಲಿ ಲಾಂಗು ಮಚ್ಚುಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಆವಲಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಸಿಲಿಕಾನ್ ಸಿಟಿ ಜನತೆಯನೇ ಬೆಚ್ಚಿ ಬೀಳಿಸಿದೆ.

ಕುಳ್ಳ ವೆಂಕಟೇಶ್ ಹತ್ಯೆಗೀಡಾದ ದುರ್ದೈವಿ. ಆವಲಹಳ್ಳಿಯ ಮಾರ್ಗೊಂಡನಹಳ್ಳಿ ಬಳಿ ಕುಳ್ಳ ವೆಂಕಟೇಶ್ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದರು. ಈ ವೇಳೆ ಆಟೋದಲ್ಲಿ ಬಂದ ಐದು ಜನ ದುಷ್ಕರ್ಮಿಗಳು ಬೈಕ್ ಗೆ ಆಟೋ ಡಿಕ್ಕಿ ಹೊಡೆದಿದ್ದಾರೆ. ಬೈಕ್ ನಿಂದ ಕುಳ್ಳ ವೆಂಕಟೇಶ್ ಕೆಳಕ್ಕೆ ಬೀಳುತ್ತಿದ್ದಂತೆ ಆಟೋದಿಂದ ಇಳಿದುಬಂದ ದುಷ್ಕರ್ಮಿಗಳು ಲಾಂಗು, ಮಚ್ಚಿನಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ.

Home add -Advt

ರಕ್ತದ ಮಡುವಲ್ಲಿ ಬಿದ್ದ ವೆಂಕಟೇಶ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕುಳ್ಳ ವೆಂಕಟೇಶ್ ಸಾವನ್ನಪ್ಪುತ್ತಿದಂತೆ ಸ್ಥಳದಿಂದ ಕಾಲ್ಕಿತ್ತಿರುವ ದಿಷ್ಕರ್ಮಿಗಳು ಪರಾರಿಯಾಗಿದ್ದಾರೆ. ಜಮೀನು ವಿಚಾರಕ್ಕೆ ಸಂಬಂಧಿಸಿದಂತೆ ಈ ಕೊಲೆ ನಡೆದಿರುವ ಅನುಮಾನ ವ್ಯಕ್ತವಾಗಿದ್ದು, ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ಪತ್ನಿ ಅಕ್ರಮ ಸಂಬಂಧ: ಫೇಸ್ ಬುಕ್ ಲೈವ್ ಗೆ ಬಂದು ಆತ್ಮಹತ್ಯೆಗೆ ಶರಣಾದ ಪತಿ

Related Articles

Back to top button