ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಂಗಳೂರಿನ ಪಾದರಾಯನಪುರ ಕಾರ್ಪೊರೇಟರ್ ಇಮ್ರಾನ್ ಪಾಷಾ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದರೂ ಆಸ್ಪತ್ರೆಗೆ ದಾಖಲಾಗದೇ ಮನೆಯಲ್ಲೇ ವಾಸವಾಗಿದ್ದರು. ಈ ಹಿನ್ನಲೆಯಲ್ಲಿ ಇಂದು ಸತತ ಮೂರುಗಂಟೆಗಳ ಕಾಲ ಆರೋಗ್ಯ ಇಲಾಖೆ ಅಧಿಕಾರಿಗಳು ಮನವೊಲಿ ಆಸ್ಪತ್ರೆಗೆ ಶಿಫ್ಟ್ ಮಾಡಿದ್ದಾರೆ.
ಇಮ್ರಾನ್ ಪಾಷಾ ಅವರಿಗೆ ಶುಕ್ರವಾರ ರಾತ್ರಿ ಕೊರೊನಾ ಪಾಸಿಟಿವ್ ವರದಿ ಬಂದಿತ್ತು. ಆದರೆ ಇದುವರೆಗೂ ಆಸ್ಪತ್ರೆಗೆ ದಾಖಲಾಗಿರಲಿಲ್ಲ. ಇಂದು ಪೊಲೀಸರು, ಆರೋಗ್ಯ ಇಲಾಖೆ ಅಧಿಕಾರಿಗಳು ಮನವೊಲಿಸಿದ ನಂತರ ಇಮ್ರಾನ್ ಆಸ್ಪತ್ರೆಗೆ ದಾಖಲಾಗಲು ಒಪ್ಪಿದ್ದು, ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಶಿಫ್ಟ್ ಆಗಿದ್ದಾರೆ.
ಇಮ್ರಾನ್ ಅವರಿಗೆ ಎರಡನೇ ಹಂತದ ಕೊರೊನಾ ಆಗಿದ್ದು, ಅತಿಯಾದ ನೆಗಡಿ ಮತ್ತು ಕೆಮ್ಮು ಇದೆ. ಇದರಿಂದ ಕುಟುಂಬಸ್ಥರಿಗೂ ಸೋಂಕು ತಗಲುವ ಸಾಧ್ಯತೆ ಇದೆ. ಅಲ್ಲದೇ ಇಮ್ರಾನ್‍ಗೆ 8 ದಿನದ ಹಿಂದೆಯೇ ಉಸಿರಾಟದ ತೊಂದರೆ ಇತ್ತು. ಮೂರು ದಿನದ ಹಿಂದೆ ದಿನಸಿ ಕಿಟ್ ವಿತರಣೆ ಕೂಡ ಮಾಡಿದ್ದರು. ಹೀಗಾಗಿ ಇಮ್ರಾನ್ ಸಂಪರ್ಕದಲ್ಲಿದ್ದವರ ಮಾಹಿತಿಯನ್ನು ಆರೋಗ್ಯ ಇಲಾಖೆ ಕಲೆ ಹಾಕುತ್ತಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ