ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಾನಸಿಕ ಅಸ್ವಸ್ಥನೋರ್ವ ರಸ್ತೆಯಲ್ಲಿ ಬರುತ್ತಿದ್ದ ವ್ಯಕ್ತಿಯೋರ್ವರಿಗೆ ಚಾಕು ಇರಿದು ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಬಿನ್ನಿಮಿಲ್ ಬಳಿ ನಡೆದಿದೆ.
ಆರೋಪಿಯನ್ನು ಗಣೇಶ್ ಎಂದು ಗುರುತಿಸಲಾಗಿದ್ದು, ಈತ ಮಾನಸಿಕ ಅಸ್ವಸ್ಥ ಎನ್ನಲಾಗಿದೆ. ರಸ್ತೆಯಲ್ಲಿ ಸಿಕ್ಕ ಸಿಕ್ಕವರಿಗೆಲ್ಲ ಚಾಕು ಇರಿಯಲು ಮುಂದಾಗಿದ್ದಾನೆ. ಈ ವೇಳೆ ಚಾಕು ಇರಿತಕ್ಕೆ ಒಳಗಾದ ವ್ಯಕ್ತಿ ಮೃತಪಟ್ಟಿದ್ದಾರೆ. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮಾಂಸದ ಅಂಗಡಿಗೆ ತೆರಳಿದ್ದ ಆರೋಪಿ ಗಣೇಶ್ ಅಲ್ಲಿದ್ದ ಚಾಕುವನ್ನು ಎತ್ತಿಕೊಂಡು ರಸ್ತೆಗೆ ಬಂದು ಕಂಡ ಕಂಡವರ ಮೇಲೆ ಚಾಕುವಿನಿಂದ ಇರಿಯುತ್ತಿದ್ದ ಎನ್ನಲಾಗಿದೆ. ಕಾಟನ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ