ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೊರೊನಾ ಸೋಂಕಿನ ವಿರುದ್ಧ ಒಗ್ಗಟ್ಟಿನಿಂದ ಹೋರಾಡಲು ಇಂದು ರಾತ್ರಿ 9 ಗಂಟೆಗೆ ದೀಪ ಹಚ್ಚಿ ಎಂದು ಪ್ರಧಾನಿ ಮೋದಿ ದೇಶದ ಜನತೆಗೆ ಕರೆ ನೀಡಿದ್ದಾರೆ. ಆದರೆ ದೀಪ ಹಚ್ಚೋ ಹೆಸರಲ್ಲಿ ರಸ್ತೆಗೆ ಬಂದರೆ ಕೇಸ್ ಹಾಕಲಾಗುತ್ತದೆ ಹುಷಾರ್ ಎಂದು ಬೆಂಗಳೂರು ನಗರ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಎಚ್ಚರಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಭಾಸ್ಕರ್ ರಾವ್, ಜನ ಅಪ್ಪಿ ತಪ್ಪಿಯೂ ರಸ್ತೆಯಲ್ಲಿ ದೀಪ ಹಚ್ಚೋದಾಗಲಿ, ಪಂಜು ಹಚ್ಚುವುದಾಗಿ ಮಾಡುವಂತಿಲ್ಲ. ದೀಪ ಹಾಗೂ ಮೇಣದಬತ್ತಿಯನ್ನು ಅವರವರ ಮನೆಯ ಟೆರೆಸ್ ಹಾಗೂ ಬಾಲ್ಕನಿಯಲ್ಲಿ ಹಚ್ಚಬೇಕು. ಬೆಂಗಳೂರು ನಗರದಲ್ಲಿ ಸೆಕ್ಷನ್ 144 ಜಾರಿ ಇರುತ್ತೆ, ಯಾವುದೇ ಕಾರಣಕ್ಕೂ ಗುಂಪು ಸೇರದೇ ಅಂತರ ಕಾಯ್ದುಕೊಳ್ಳಬೇಕು. ಸಾರ್ವಜನಿಕ ಸ್ಥಳಗಳಲ್ಲೂ ದೀಪ ಹಚ್ಚಬಾರದು ಎಂದು ತಿಳಿಸಿದ್ದಾರೆ.
ರಾತ್ರಿ 9 ಗಂಟೆ 9 ನಿಮಿಷಕ್ಕೆ ಸರಿಯಾಗಿ ದೀಪ ಹಾಗೂ ಮೊಂಬತ್ತಿ ಹಚ್ಚಿಸಬೇಕು. ಒಂದು ವೇಳೆ ಲಾಕ್‍ಡೌನ್ ಉಲ್ಲಂಘಿಸಿದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಭಾಸ್ಕರ್ ರಾವ್ ವಾರ್ನಿಂಗ್ ಕೊಟ್ಟಿದ್ದಾರೆ.
ವಿಶ್ವಾದ್ಯಂತ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಮುಂಜಾಗೃತಾ ಕ್ರಮವಾಗಿ ದೇಶದಲ್ಲಿ ಲಾಕ್ ಡೌನ್ ಘೋಷಿಸಲಾಗಿದೆ. ಕೊರೊನಾ ವಿರುದ್ಧ ದೇಶದ ಜನತೆ ಒಗ್ಗಟ್ಟಿನ ಹೋರಾಟ ನಡೆಸಬೇಕು ಈ ನಿಟ್ಟಿನಲ್ಲಿ ಇಂದು ರಾತ್ರಿ 9 ಗಂಟೆ 9 ನಿಮಿಷಕ್ಕೆ ಸರಿಯಾಗಿ ದೀಪ ಹಾಗೂ ಮೊಂಬತ್ತಿ ಹಚ್ಚಿಸಿ ಕೊರೊನಾದಂತಹ ಅಂಧಕಾರವನ್ನು ಓಡಿಸಿ ಎಂದು ಕರೆ ನೀಡಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ