Kannada NewsKarnataka News
*ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು*
ಪ್ರಗತಿವಾಹಿನಿ ಸುದ್ದಿ: ಉಡುಪಿ ಜಿಲ್ಲೆಯ ಮಣಿಪಾಲದ ಹೆರ್ಗದಲ್ಲಿ ಚಿಕ್ಕಮಗಳೂರು ಕೊಪ್ಪ ತಾಲೂಕಿನ ಹರಂದೂರು ಗ್ರಾಮದ ಶ್ರೀನಿಧಿ ಶೆಟ್ಟಿ (20) ಎಂಬ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡವರು ಘಟನೆ ನಡೆದಿದೆ.
ಈ ಯುವತಿ ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಸಿಎ ವ್ಯಾಸಂಗ ಮಾಡುತ್ತಿದ್ದರು. ಇತ್ತೀಚೆಗೆ ಡಯಾಲಿಸಿಸ್ ಹಿನ್ನೆಲೆಯಲ್ಲಿ ಮೃತಳ ತಂದೆಯಾದ ಕೊಪ್ಪ ಹರಂದೂರು ಗ್ರಾಮದ ಮಹೇಶ್ ಎನ್ನುವವರು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಹೆರ್ಗ ಗ್ರಾಮದಲ್ಲಿ ಬಾಡಿಗೆ ಮನೆ ಮಾಡಿಕೊಂಡು ಪತ್ನಿ ಹಾಗೂ ಮಗಳೊಂದಿಗೆ ಮಹೇಶ್ ವಾಸವಾಗಿದ್ದರು. ಬಾಡಿಗೆ ಮನೆಯ ರೂಮ್ನಲ್ಲಿ ಯಾರೂ ಇಲ್ಲದ ವೇಳೆ ಶ್ರೀನಿಧಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾಳೆ. ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆ ಇನ್ನೂ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮಾಡುತ್ತಿದ್ದಾರೆ.



