Latest

ಪೊಲೀಸ್ ಕಮಿಷನರ್ ಕಚೇರಿ ಸೀಲ್ ಡೌನ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಪೊಲೀಸ್ ಕಮಿಷನರ್ ಕಚೇರಿಯಲ್ಲಿ 12 ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಈ ಹಿನ್ನೆಲೆಯಲ್ಲಿ ಪೊಲೀಸ್ ಆಯುಕ್ತರ ಕಚೇರಿಯನ್ನು ಸೀಲ್‍ಡೌನ್ ಮಾಡಲಾಗಿದೆ.

ಮೂರು ದಿನಗಳ ಕಾಲ ಪೊಲೀಸ್ ಆಯುಕ್ತರ ಕಚೇರಿಯನ್ನು ಸೀಲ್‍ಡೌನ್ ಮಾಡಲಾಗಿದೆ. ಇದುವರೆಗೂ ವಿವಿಧ ಪೊಲೀಸ್ ಠಾಣೆಯ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಪೊಲೀಸ್ ಸೋಂಕಿತರ ಸಂಖ್ಯೆ 450ಕ್ಕೆ ಏರಿಕೆಯಾಗಿದೆ.

ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಸಿಸಿಆರ್ ಬಿ ವಿಭಾಗದಲ್ಲಿ 8 ಮತ್ತು ಅಡ್ಮಿನ್ ವಿಭಾಗದಲ್ಲಿ ನಾಲ್ವರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಕಳೆದ ಒಂದು ವಾರದಿಂದ ರ‍್ಯಾಂಡಮ್‌ ಟೆಸ್ಟ್ ಮಾಡಲಾಗಿತ್ತು. ರ‍್ಯಾಂಡಮ್‌ ಟೆಸ್ಟ್ ನಲ್ಲಿ ಕೊರೊನಾ ಪತ್ತೆಯಾಗಿದೆ. ಹೀಗಾಗಿ ಮೂರು ದಿನಗಳ ಕಾಲ ಕಚೇರಿಯನ್ನು ಸೀಲ್ ಡೌನ್ ಮಾಡಲಾಗಿದೆ.

ವಿಧಾನಸೌಧ ಠಾಣೆಯ ಕಾನ್ಸ್​ಟೇಬಲ್​ಗೆ ಸೋಂಕು ಇರುವುದು ದೃಢವಾದ ಹಿನ್ನಲೆಯಲ್ಲಿ ಈಗಾಗಲೇ ವಿಧಾನಸೌಧ ಪೊಲೀಸ್ ಠಾಣೆಯನ್ನು ಒಂದು ದಿನ ಸೀಲ್‍ಡೌನ್ ಮಾಡಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button