Latest

ರಾಜಧಾನಿಯಲ್ಲಿ ಬೆಳಂಬೆಳಿಗ್ಗೆ ಪೊಲೀಸ್ ಫೈರಿಂಗ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರ ಹತ್ಯೆಗೆ ಯತ್ನಿಸಿದ್ದ ಇಬ್ಬರು ಆರೋಪಿಗಳ ಕಾಲಿಗೆ ಪೊಲೀಸರು ಗುಂಡು ಹೊಡೆದಿರುವ ಘಟನೆ ಬೆಂಗಳೂರಿನ ಜಾಲಹಳ್ಳಿ ಬಳಿ ನಡೆದಿದೆ.

ಆರೋಪಿಗಳಾದ ಭರತ್ ಮತ್ತು ಅರುಣ್ ಕುಮಾರ್ ಮೇಲೆ ಸೋಲದೇವನಹಳ್ಳಿ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಜಾಲಹಳ್ಳಿ ಬಳಿ ಆರೋಪಿಗಳನ್ನು ಬಂಧಿಸಲು ಹೋದ ವೇಳೆ ಆರೋಪಿಗಳು ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದರು. ಈ ವೇಳೆ ಪೊಲೀಸರು ಫೈರಿಂಗ್ ಮಾಡಿದ್ದಾರೆ.

ಆರೋಪಿಗಳಾದ ಭರತ್ ಮತ್ತು ಅರುಣ್ ಕುಮಾರ್ ಕಳೆದ 23 ರಂದು ಹೆಸರಗಟ್ಟ ನಿವಾಸಿ ರಾಜಶೇಖರ್ ಮೇಲೆ ಅಟ್ಯಾಕ್ ಮಾಡಿ ಕೊಲೆಗೆ ಯತ್ನಿಸಿದ್ದರು. ಆರೋಪಿಗಳು ರಾಜಶೇಖರ್ ಸಂಬಂಧಿ ಶ್ರೀನಿವಾಸ್‍ನಿಂದ ಕೊಲೆಗೆ ಸುಫಾರಿ ಪಡೆದಿದ್ದರು. ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ದೂರುದಾರ ರಾಜಶೇಖರ್ ಮತ್ತು ಆರೋಪಿ ಶ್ರೀನಿವಾಸ್ ನಡುವೆ ವ್ಯಾಜ್ಯವಿತ್ತು ಎಂದು ತಿಳಿದು ಬಂದಿದೆ.

ಆದರೆ ಭರತ್ ಮತ್ತು ಅರುಣ್ ಕುಮಾರ್ ಹತ್ತು ಲಕ್ಷ ಹಣಕ್ಕೆ ಸುಫಾರಿ ಪಡೆದು ಕೊಲೆಗೆ ಯತ್ನಿಸಿ ಎಸ್ಕೇಪ್ ಆಗಿದ್ದರು. ಖಚಿತ ಮಾಹಿತಿ ಮೇರೆಗೆ ಜಾಲಹಳ್ಳಿ ಬಳಿ ಬಂಧಿಸಲು ಹೋದಾಗ ಆರೋಪಿಗಳು ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ. ಆಗ ಆರೋಪಿಗಳ ಕಾಲಿಗೆ ಪೊಲೀಸರು ಗುಂಡು ಹೊಡೆದಿದ್ದಾರೆ. ಇಬ್ಬರು ಆರೋಪಿಗಳನ್ನು ವಶಪಡಿಸಿಕೊಂಡು, ಆಸ್ಪತ್ರೆಗೆ ದಾಖಲಿಸಲಾಗಿದೆ.

Home add -Advt

 

Related Articles

Back to top button