Latest

ಬಾರ್ ಮಾಲೀಕನ ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಾರ್ ಮಾಲೀಕನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಪತ್ತೆಗಾಗಿ ಪೊಲೀಸರು ಒಂಭತ್ತು ವಿಶೇಷ ತಂಡ ರಚನೆ ಮಾಡಿದ್ದಾರೆ.

ಬಾರ್ ಮಾಲೀಕ ಮನೀಶ್ ಶೆಟ್ಟಿಯನ್ನು ನಿನ್ನೆ ರಾತ್ರಿ ಬೆಂಗಳೂರಿನಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಟಿವಿ ದೃಶ್ಯಾವಳಿಗಳು ಲಭ್ಯವಾಗಿದ್ದು, ಕೃತ್ಯಕ್ಕೆ ಬಳಸಲಾಗಿದ್ದ ಬೈಕ್, ಮಾರಕಾಸ್ತ್ರಗಳನ್ನು ಸ್ಥಳದಲ್ಲೇ ಬಿಟ್ಟು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಆರೋಪಿಗಳ ಬಗ್ಗೆ ಈಗಾಗಲೇ ಸಾಕಷ್ಟು ಸಾಕ್ಷ್ಯಗಳು ಲಭ್ಯವಾಗಿವೆ.

Home add -Advt

ಇವುಗಳನ್ನು ಆಧರಿಸಿ ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಇನ್ನು ಹತ್ಯೆಯಾಗಿರುವ ಬಾರ್ ಮಾಲೀಕ ಮನೀಶ್, ಡ್ರಗ್ ಪೆಡ್ಲರ್ ಸಂತೋಷ್ ಶೆಟ್ಟಿ ಜೊತೆ ಸಂಪರ್ಕ ಹೊಂದಿದ್ದ ಎನ್ನಲಾಗಿದೆ. ಅಲ್ಲದೇ ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ನಡೆದಿದ್ದ ಕಿಶನ್ ಹೆಗ್ಡೆ ಕೊಲೆಯ ಸೇಡು ತೀರಿಸಿಕೊಳ್ಳಲು ಮನೀಶ್ ಕೊಲೆ ನಡೆದಿದೆ ಎಂಬ ಅನುಮಾನವೂ ಮೂಡಿದೆ. ಈ ಎಲ್ಲಾ ಸಂಗತಿಗಳನ್ನು ಭೇದಿಸುವ ನಿಟ್ಟಿನಲ್ಲಿ ಇದೀಗ ಪೊಲೀಸರು ವಿಶೇಷ ತಂಡ ರಚನೆ ಮಾಡಿದ್ದಾರೆ.

Related Articles

Back to top button