Latest

ನೋಡ ನೋಡುತ್ತಿದ್ದಂತೆ ರಾಜಕಾಲುವೆಯಲ್ಲಿ ಬಿದ್ದು ಕೊಚ್ಚಿಹೋದ ಬಾಲಕಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ನೆನ್ನೆಯಿಂದ ಬೆಂಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ರಾಜಕಾಲುವೆಗಳು ತುಂಬಿ ಹರಿಯುತ್ತಿವೆ. ಈ ನಡುವೆ 6 ವರ್ಷದ ಹೆಣ್ಣು ಮಗು ರಾಜಕಾಲುವೆಗೆ ಬಿದ್ದು ಕೊಚ್ಚಿಕೊಂಡು ಹೋಗಿರುವ ಘಟನೆ ಬೆಳ್ಳಂದೂರಿನ ಕರಿಯಮ್ಮನಗರದಲ್ಲಿ ನಡೆದಿದೆ.

ಅಸ್ಸಾನಿಂದ ಕೂಲಿ ಕೆಲಸಕ್ಕೆ ಬಂದಿದ್ದ ದಂಪತಿ 6 ವರ್ಷದ ಬಾಲಕಿ ಭೂಮಿಕಾ ರಾಜಕಾಲುವೆಯಲ್ಲಿ ಕೊಚ್ಚಿಹೋದ ಮಗು ಎಂದು ತಿಳಿದುಬಂದಿದೆ.

ಇಂದು ಮಧ್ಯಾಹ್ನ ಸುಮಾರು 2 ಗಂಟೆ ವೇಳೆ ಆಟವಾಡುತ್ತಿರುವಾಗ ಮಾರತಹಳ್ಳಿಯ ರಾಜಕಾಲುವೆಗೆ ಬಿದ್ದಿದ್ದಾಳೆ. ಸ್ವಲ್ಪ ದೂರದವರೆಗೂ ತೇಲಿಹೋದ ಮಗು ಬಳಿಕ ನೀರಿನಲ್ಲಿ ಮುಳುಗಿ ಕಣ್ಮರೆಯಾಗಿದ್ದಾಳೆ.

ಸ್ಥಳಕ್ಕೆ ಸರ್ಜಾಪುರ ಮತ್ತು ಮಹದೇವಪುರ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿದ್ದು, ಬೋಟ್ ಮೂಲಕ ಮಗುವಿನ ಪತ್ತೆ ಕಾರ್ಯಾಚರಣೆ ನಡೆಸಿದ್ದಾರೆ.

Home add -Advt

Related Articles

Back to top button