ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಇಂದು ದೇಶಾದ್ಯಂತ 71ನೇ ಗಣರಾಜ್ಯೋತ್ಸವದ ಸಂಭ್ರಮ. ಈ ಹಿನ್ನಲೆಯಲ್ಲಿ ಬೆಂಗಳೂರಿನ ಮಾಣಿಕ್ ಷಾ ಪೆರೇಡ್ ಮೈದಾನದಲ್ಲಿ ರಾಜ್ಯಪಾಲ ವಜುಭಾಯಿ ವಾಲಾ ಅವರು ಧ್ವಜಾರೋಹಣ ನೆರವೇರಿಸಿದರು.
ಕಾರ್ಯಕ್ರಮಕ್ಕೆ ಕೇಸರಿ, ಬಿಳಿ, ಹಸಿರು ಬಣ್ಣದ ಶಾಲು ಹಾಕಿ ಸಿಎಂ ಬಿಎಸ್ ಯಡಿಯೂರಪ್ಪ ಆಗಮಿಸಿದ್ದು ವಿಶೇಷವಾಗಿತ್ತು. ಧ್ವಾಜರೋಹಣದ ವೇಳೆ ಹೆಲಿಕಾಪ್ಟರ್ ಮೂಲಕ ಪುಷ್ಪವೃಷ್ಠಿ ಸುರಿಸಲಾಯಿತು.ಬಳಿಕ ರಾಜ್ಯಪಾಲರು ತೆರೆದ ಜೀಪಿನಲ್ಲಿ ಮಾಣೆಕ್ ಷಾ ಮೈದಾದಲ್ಲಿ ಗೌರವರಕ್ಷಾ ವಂದನೆ ಸ್ವೀಕಾರ ಮಾಡಿದರು.
ಈ ವೇಳೆ 44 ತುಕಡಿಗಳ 1750 ವಿದ್ಯಾರ್ಥಿಗಳಿಂದ ಕವಾಯತು ಮತ್ತು ಪಥ ಸಂಚಲನ. ಮೊದಲ ಬಾರಿಗೆ ಬಿಬಿಎಂಪಿ ಪೌರ ಕಾರ್ಮಿಕರಿಂದ ಸ್ವಚ್ಛ ಭಾರತ್ ಅಭಿಯಾನದ ಜಾಗೃತಿ ಕುರಿತು ಪಥ ಸಂಚಲನ ನಡೆಸಲಾಯಿತು.
ಈ ವೇಳೆ ಮಾತನಾಡಿದ ವಜುಭಾಯಿ ವಾಲಾ, ರಾಜ್ಯದ ಜಾನಾತೆಗೆ ಗಣರಾಜ್ಯೋತ್ಸವದ ಶುಭ ಕೋರಿದರು. ಗಾಂಧೀಜಿ ಕಂಡ ಕನಸು ನನಸಾಗುತ್ತಿದೆ. ಸರ್ಕಾರ ರೈತರ ಬ್ಯಾಂಕ್ ಖಾತೆಗೆ ಹಣ ಹಾಕುತ್ತಿದೆ. ರೈತರ ಅಭೀವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಕೃಷಿ ಸಂಚಾಯ್ ಯೋಜನೆಯಿಂದ ಲಾಭವಾಗಿದೆ. ರಾಜ್ಯದ ಜೊತೆ ಕೇಂದ್ರ ಸರ್ಕಾರ ಕೈ ಜೋಡಿಸಿದೆ ಎಂದರು.
ಅಪರಾಧ ತಡೆಯುವ ಹಾಗೂ ಅವುಗಳ ತನಿಖೆಯನ್ನು ತುರ್ತಾಗಿ ಕೈಗೊಳ್ಳುವ ನಿಟ್ಟಿನಲ್ಲಿ ಅತ್ಯಾಧುನಿಕ ತಂತ್ರಜ್ಞಾನ, ಕಾರ್ಯಪದ್ಧತಿ ಸುಸಜ್ಜಿತಗೊಳಿಸುತ್ತಿದೆ. ಉತ್ತಮ ಆಡಳಿತ ನಿರ್ವಹಣೆ ಸೂಚ್ಯಂಕದಲ್ಲಿ ರಾಜ್ಯ 3ನೇ ಸ್ಥಾನದಲ್ಲಿದೆ ಎಂದು ಹೇಳಿದರು.
ಇದೇ ವೇಳೆ ಉತ್ತರ ಕರ್ನಾಟಕದ ನೆರೆ ಬಗ್ಗೆ ಪ್ರಸ್ತಾಸಿದ್ದು, ನೆರೆಯಿಂದ ಬೆಳೆ, ಸಾರ್ವಜನಿಕರ ಆಸ್ತಿ-ಪಾಸ್ತಿ ನಾಶ ಆಗಿದೆ. ಸರ್ಕಾರ ತಕ್ಷಣ ಸ್ಪಂದಿಸಿ 7 ಲಕ್ಷ ಜನರನ್ನ ಸ್ಥಳಾಂತರ ಮಾಡಲಾಗಿದೆ. ಪ್ರತಿ ಕುಟುಂಬಕ್ಕೆ 10 ಸಾವಿರ ಪರಿಹಾರ ಕೊಡಲಾಗಿದೆ. ಮನೆ ನಿರ್ಮಾಣಕ್ಕೆ 5 ಲಕ್ಷ ಭಾಗಶಃ ಮನೆಗಳ ದುರಸ್ತಿಗೆ 50 ಸಾವಿರ ಮಂಜೂರು ಮಾಡಿದೆ. ಎನ್‍ಡಿಆರ್‍ಎಫ್ ಈ ನಿಯಮ ಮೀರಿ ರಾಜ್ಯ ಸರ್ಕಾರವೇ ಹೆಚ್ಚುವರಿ ಹಣ ನೀಡಿದೆ ಎಂದು ತಿಳಿಸಿದರು.
ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಬಿಗಿ ಭದ್ರತೆ ಕಲ್ಪಿಸಲಾಗಿದ್ದು, ಮೈದಾನಕ್ಕೆ ಆಗಮಿಸುವವರು ಮೊಬೈಲ್, ಹೆಲ್ಮೆಟ್, ಛತ್ರಿ, ಕ್ಯಾಮರಾ, ರೇಡಿಯೋ, ಮುಂತಾದ ಯಾವುದೇ ವಸ್ತುಗಳನ್ನು ತರದಂತೆ ನಿಷೇಧಿಸಲಾಗಿತ್ತು. ಈ ವಸ್ತುಗಳನ್ನು ತಂದರೆ ಮೈದಾನಕ್ಕೆ ಪ್ರವೇಶ ನಿರ್ಬಂಧಿಸಲಾಗಿತ್ತು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ