ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಬೆಳ್ಳಂ ಬೆಳಿಗ್ಗೆ ಪೊಲೀಸರ ಗುಂಡಿನ ಸದ್ದು ಮೊರಗಿದೆ. ಕೊಲೆ ಆರೋಪಿ ಮೇಲೆ ಬಾಗಲೂರು ಠಾಣಾ ಪೊಲೀಸಾರು ಗುಂಡಿನ ದಾಳಿ ನಡೆಸಿದ್ದಾರೆ.
ರವಿ ಅಲಿಯಾಸ್ ಕಮ್ರಾನ್ ರವಿ ಮೇಲೆ ಬಾಗಲೂರು ಪೊಲೀಸ್ ಇನ್ಸ್‌ಪೆಕ್ಟರ್ ಬಿ. ರಾಮಮೂರ್ತಿ ಅವರು ಗುಂಡು ಹಾರಿಸಿದ್ದಾರೆ. ಬೆಂಗಳೂರು ನಗರದ ಕೋಗಿಲು ಕ್ರಾಸ್ ಬಳಿ ಈ ಘಟನೆ ನಡೆದಿದೆ.
ಕಮ್ರಾನ್ ರವಿ ಮಾರ್ಚ್ 10ರಂದು ಮಿಟ್ಟಗಾನಹಳ್ಳಿ ಬಳಿ ನಡೆದಿದ್ದ ಉಮಾಶಂಕರ್ ಅಲಿಯಾಸ್ ದೊಂಗನ ಕೊಲೆ ಪ್ರಕರಣದ ಆರೋಪಿಯಾಗಿದ್ದು, ಉಮಾಶಂಕರನನ್ನ ಕೊಲೆಗೈದು ಆಕ್ಸಿಡೆಂಟ್ ಮಾದರಿಯಲ್ಲಿ ಬಿಂಬಿಸಲು ಆರೋಪಿ ಯತ್ನಿಸಿದ್ದನು. ಆದರೆ ಉಮಾಶಂಕರ್ ಪತ್ನಿ ಧನಲಕ್ಷ್ಮೀ ಹೇಳಿಕೆ ಅನ್ವಯ ಬಾಗಲೂರು ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿತ್ತು. ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದರು.
ಕೋಗಿಲು ಕ್ರಾಸ್ ಬಳಿ ಆರೋಪಿಗಳಾದ ರವಿ ಹಾಗೂ ರಾಜೇಶ್ ಇರುವ ಮಾಹಿತಿ ಲಭ್ಯವಾದ ಹಿನ್ನೆಲೆ ಸ್ಥಳಕ್ಕೆ ಪೊಲೀಸರು ಧಾವಿಸಿದ್ದು, ಈ ವೇಳೆ ಪೊಲೀಸರ ಮೇಲೆ ಹಲ್ಲೆಗೆ ರವಿ ಮುಂದಾಗಿದ್ದಾನೆ. ಆತ್ಮರಕ್ಷಣೆಗಾಗಿ ಇನ್ಸ್‌ಪೆಕ್ಟರ್ ಬಿ. ರಾಮಮೂರ್ತಿ ಅವರು ಆರೋಪಿ ಕಾಲಿಗೆ ಗುಂಡೇಟು ಹೊಡೆದು ಬಂಧಿಸಿದ್ದಾರೆ. ಸದ್ಯ ಗಾಯಗೊಂಡ ಆರೋಪಿಗಳನ್ನು ಆಸ್ಪತ್ರಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ