Latest

ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಸ್ಯಾಟಲೈಟ್ ಟೌನ್ ನಿರ್ಮಾಣ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಂಗಳೂರನ್ನು ಅಂತರರಾಷ್ಟ್ರೀಯ ಮಟ್ಟದ ನಗರವಾಗಿಸಲು ಸರ್ಕಾರ ಸಂಕಲ್ಪ ಮಾಡಿದೆ ಹಾಗೂ ಅದಕ್ಕೆ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಪಿ.ಎಸ್.ಆರ್. ಬಿಲ್ಡರ್, ಗ್ರಾಸ್‍ರೂಟ್, ಎ.ಬಿ.ಎಸ್.ಎಸ್. ಇವರ ಸಹಭಾಗಿತ್ವದಲ್ಲಿ ಗಂಗಾನಗರದಲ್ಲಿ ಆಯೋಜಿಸಿದ್ದ ನಾಡಪ್ರಭು ಕೆಂಪೇಗೌಡರ 513ನೇ ಜಯಂತೋತ್ಸವ ಅಂಗವಾಗಿ ಶಾಲಾ ಮಕ್ಕಳಿಗೆ ವಿದ್ಯಾರ್ಥಿ ವೇತನ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಬೆಂಗಳೂರು ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ. ಈಗಾಗಲೇ ನಗರೋತ್ಥಾನ ಯೋಜನೆಯಡಿ 6 ಸಾವಿರ ಕೋಟಿ ರೂ.ಗಳ ಕಾಮಗಾರಿಗಳು ಪ್ರಾರಂಭ ವಾಗಿವೆ. ರಾಜಕಾಲುವೆಗಳ ಅಭಿವೃದ್ಧಿ ಗೆ 1600 ಕೋಟಿ ರೂ.ಗಳ ನ್ನು ಒದಗಿಸಲಾಗಿದೆ. ಸಬ್ ಅರ್ಬನ್ ರೈಲು ಯೋಜನೆಗೆ ಪ್ರಧಾನಮಂತ್ರಿಗಳು ಇತ್ತೀಚೆಗೆ ಶಂಕುಸ್ಥಾಪನೆ ಮಾಡಿದ್ದಾರೆ. ಪೆರಿಫೆರಲ್ ರಿಂಗ್ ರೋಡಿಗೆ ಟೆಂಡರ್ ಕರೆಯಲಾಗಿದೆ. ಈ ವರ್ಷ ಕಾಮಗಾರಿ ಪ್ರಾರಂಭವಾಗುತ್ತದೆ. ಮೆಟ್ರೋ ವಿಸ್ತರಣೆಯಾಗುತ್ತಿದೆ. ನಗರದ ಸೌಂದರ್ಯೀಕರಣಕ್ಕೆ ಕೆರೆಗಳ ಅಭಿವೃದ್ಧಿ ಕೈಗೊಳ್ಳಲಾಗಿದೆ. ಮೂಲಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚು ಒಟ್ಟು ನೀಡಲಾಗಿದೆ. ಬಡವರು ಇರುವ ಸ್ಥಳಗಳ ಅಭಿವೃದ್ಧಿಗೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಇದನ್ನು ಖಂಡಿತವಾಗಿಯೂ ಮಾಡಿಯೇ ತೀರುತ್ತೇವೆ ಎಂದರು.

ಹಿಂದಿನ ಸರ್ಕಾರಗಳು ಕೆಲಸಗಳನ್ನು ಮಾಡದಿರುವ ಕಾರಣದಿಂದ ಒಂದೇ ಬಾರಿಗೆ ಸಮಸ್ಯೆಗಳು ಒದಗಿಬಂದಿದೆ. ಕಾಲಕಾಲಕ್ಕೆ ರಾಜಕಾಲುವೆ, ರಸ್ತೆ, ಒಳಚರಂಡಿ ವ್ಯವಸ್ಥೆಗಳನ್ನು ಅಭಿವೃದ್ಧಿ ಮಾಡಿದ್ದಾರೆ ಈ ಸಮಸ್ಯೆ ಬರುತ್ತಿರಲಿಲ್ಲ. ಕಾವೇರಿ 5ನೇ ಹಂತದ ನೀರನ್ನು , ಯುಜಿಡಿ ವ್ಯವಸ್ಥೆ ಯನ್ನು, ಕುಡಿಯುವ ನೀರಿನ ವ್ಯವಸ್ಥೆ, ಹಾಗೂ ರಸ್ತೆಗಳನ್ನು ಅಭಿವೃದ್ಧಿ ಮಾಡುವುದು ನಮ್ಮ ಮುಂದಿರುವ ಸವಾಲು. ಈ ಸವಾಲನ್ನು ಸ್ವೀಕರಿಸಿದ್ದು, ಈಗಾಗಲೇ ಎಲ್ಲ ಕಡೆ ಕೆಲಸ ಪ್ರಾರಂಭವಾಗಿದೆ. ಬರುವ ದಿನಗಳಲ್ಲಿ ಬೆಂಗಳೂರನ್ನು ಸುಂದರ ನಗರವನ್ನಾಗಿಸಲಾಗುವುದು. ಜನಕ್ಕೆ ಅನುಕೂಲವಾಗುವ ಎಲ್ಲ ಕಾಮಗಾರಿ ಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದರು.

ಬೆಂಗಳೂರಿನ ದಟ್ಟಣೆ ನಿವಾರಿಸಲು ಸ್ಯಾಟಲೈಟ್ ಟೌನ್ ಗಳ ನಿರ್ಮಾಣ
ಇತ್ತೀಚೆಗಷ್ಟೇ ಪೊಲೀಸ್ ಆಯುಕ್ತರೊಂದಿಗೆ ಸಭೆ ನಡೆಸಿ ಸಂಚಾರ ವ್ಯವಸ್ಥೆ ಯನ್ನು ಸುಗಮಗೊಳಿಸಲು ನಿರ್ದೇಶನ ನೀಡಿದ್ದೇನೆ. ಹತ್ತು ಹಲವಾರು ಕಾರ್ಯಕ್ರಮಗಳನ್ನು ಕೈಗೊಂಡು ಬೆಂಗಳೂರಿನ ಸಮಗ್ರ ಅಭಿವೃದ್ಧಿಯತ್ತ ನಡೆದಿದ್ದೇವೆ. ಬೆಂಗಳೂರಿನ ದಟ್ಟಣೆ ನಿವಾರಿಸಲು ಸ್ಯಾಟಲೈಟ್ ಟೌನ್ ಗಳ ನಿರ್ಮಾಣ ಕ್ಕೆ ನಮ್ಮ ಸರ್ಕಾರ ಹೆಚ್ಚಿನ ಒತ್ತು ನೀಡುತ್ತಿದೆ. ಮೂಲಭೂತ ಸೌಕರ್ಯ ಬೆಂಗಳೂರಿನ ನಾಗರಿಕರಿಗೆ ದೊರೆಯಬೇಕು ಎಂಬ ದೂರದೃಷ್ಟಿಯಿಂದ ಕೆಲಸ ಮಾಡುತ್ತಿ ದ್ದೇವೆ.

ಯಾವುದೇ ಭೇದಭಾವ ಮಾಡದೆ ಎಲ್ಲಾ ವಾರ್ಡುಗಳಲ್ಲಿ ಸಮಗ್ರ ಅಭಿವೃದ್ಧಿ

ಮುಂದೆ ನಡೆಯಲಿರುವ ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಭಾಜಪ ಅಭ್ಯರ್ಥಿಗಳು ಗೆದ್ದು ಜನರ ಸೇವೆಯನ್ನು ಅತ್ಯಂತ ಪ್ರಾಮಾಣಿಕಯಿಂದ ಮಾಡಿದರೆ, ಯೋಜನೆಗಳನ್ನು ವಾರ್ಡುಗಳಲ್ಲಿ ಜನರಿಗೆ ಮುಟ್ಟಿಸುವ ಕೆಲಸ ಮಾಡಿದರೆ ಖಂಡಿತವಾಗಿಯೂ ಜನರು ನಮ್ಮನ್ನು ಹರಸಿ ಆಶೀರ್ವಾದ ಮಾಡುತ್ತಾರೆ. ಸರ್ಕಾರ ಯಾವುದೇ ಬೇಧಭಾವ ಮಾಡದೆ ಎಲ್ಲಾ ವಾರ್ಡುಗಳಲ್ಲಿ ಸಮಗ್ರ ಅಭಿವೃದ್ಧಿಯನ್ನು ಮಾಡುತ್ತೇವೆ ಎಂದರು.

5000 ವಿದ್ಯಾರ್ಥಿಗಳನ್ನು ದತ್ತು ತೆಗೆದುಕೊಳ್ಳುವುದು ಸಾಮಾನ್ಯ ಕೆಲಸವಲ್ಲ. ಇನ್ನೂ 5 ಸಾವಿರ ವಿದ್ಯಾರ್ಥಿಗಳನ್ನು ಮುಂದಿನ ವರ್ಷ ದತ್ತು ತೆಗೆದುಕೊಳ್ಳಲಾಗುವುದು ಎಂದು ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಘೋಷಿಸಿದ್ದಾರೆ. ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡಿ, ದತ್ತು ತೆಗೆದುಕೊಳ್ಳುವ ಮೂಲಕ ವಿದ್ಯಾರ್ಜನೆಗೆ ಸಹಾಯ ಮಾಡಿ ಎಲ್ಲರಿಗೂ ಉತ್ತಮ ಭವಿಷ್ಯ ಬರೆಯುವ ಒಬ್ಬ ನಾಯಕರು ಅವರು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಜನರ ಹೃದಯದಲ್ಲಿ ಸ್ಥಾನ ಪಡೆಯುವುದು ಬಹಳ ಮುಖ್ಯ
ಕಟ್ಟಾ ಸುಬ್ರಮಣ್ಯ ನಾಯ್ಡು ಅವರು ಶಕ್ತಿ ಇದ್ದಂತೆ. ಸದಾ ಕಾಲ ಚಲನಶೀಲರು. ಈ ಕ್ಷೇತ್ರದೊಂದಿಗೆ ಆತ್ಮೀಯ ಸಂಬಂಧವಿದೆ. ಬಡವರ ಕೆಲಸ ಕಾರ್ಯಗಳನ್ನು ಮಾಡಿಕೊಂಡು ಬಂದಿದ್ದಾರೆ. ಬೆಂಗಳೂರಿನ ಹಾಗೂ ಕರ್ನಾಟಕದ ಅಭಿವೃದ್ಧಿ ಬಗ್ಗೆ ಸದಾ ಚಿಂತಿಸುವ ನಾಯಕ.ಇಂದು ಅವರು ಆಯೋಜಿಸಿರುವ ಕಾರ್ಯಕ್ರಮ ಬಡವರ ಬಗೆಗಿನ ಅವರ ಪ್ರೀತಿಯ ಸಂಕೇತ. ಕೆಂಪೇಗೌಡರ 513 ನೇ ಜಯಂತ್ಯೋತ್ಸವ ಅರ್ಥಪೂರ್ಣ ವಾಗಬೇಕು ಹಾಗೂ ಕೆಂಪೇಗೌಡರಿಗೆ ಗೌರವ ಬರುವ ರೀತಿಯಲ್ಲಿ ಆಗಬೇಕೆಂಬ ಕಾರಣದಿಂದ ಈ ಕ್ಷೇತ್ರದ ಬಡ ಮಕ್ಕಳಿಗೆ ವಿದ್ಯಾರ್ಥಿ ವೇತನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಕ್ಷೇತ್ರದ ಮಕ್ಕಳು ಹೆಚ್ಚಿನ ವಿದ್ಯಾವಂತರಾಗಬೇಕು. ಜ್ಞಾನಾರ್ಜನೆ ಮಾಡುವ ಮುಖಾಂತರ ಎಲ್ಲಾ ಕ್ಷೇತ್ರಗಳಲ್ಲಿ ಮುಂದೆ ಬರಬೇಕು. ಈ ಕ್ಷೇತ್ರದ ಜನ ಮುಂದೆ ಬಂದರೆ ತನ್ನಿಂದ ತಾನೇ ಈ ಕ್ಷೇತ್ರದ ಅಭಿವೃದ್ಧಿಯಾಗುತ್ತದೆ ಎನ್ನುವ ಕಲ್ಪನೆ ಹಾಗೂ ದೂರದೃಷ್ಟಿ ಯಿಂದ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಅವರು ಈ ಕೆಲಸ ಮಾಡಿದ್ದಾರೆ. ಇದು ಅವರು ಮೊದಲಿನಿಂದಲೂ ಮಾಡಿಕೊಂಡು ಬಂದಿದ್ದಾರೆ. ಕೋವಿಡ್ ಸಂದರ್ಭದಲ್ಲಿ ಬಡವರಿಗೆ ಆಹಾರ ಕಿಟ್ ವಿತರಿಸಿದ್ದಾರೆ. ಒಬ್ಬ ವ್ಯಕ್ತಿ ಜನನಾಯಕ ನಾಯಕನಾಗಲು ಅಧಿಕಾರವೇ ಬೇಕೆಂದಿಲ್ಲ. ಜನರ ಪರವಾಗಿ ಚಿಂತನೆ ಮಾಡಿ, ಜನಪರ ಹೋರಾಟ ಮಾಡಿ, ಜನರ ದನಿಯಾಗಿ, ಜನರ ಸಂಕಷ್ಟಕ್ಕೆ ಸಹಾಯ ಮಾಡುವ ಕೆಲಸ ಮಾಡಿದಾಗ ಜನನಾಯಕರಾಗುತ್ತಾರೆ. ಪ್ರಜಾಪ್ರಭುತ್ವದಲ್ಲಿ ಜನರ ಹೃದಯ ದಲ್ಲಿ ಸ್ಥಾನ ಪಡೆಯುವುದು ಬಹಳ ಮುಖ್ಯ. ಯಾರು ಜನ ಹೃದಯದಲ್ಲಿ ಸ್ಥಾನ ಪಡೆಯುತ್ತಾರೋ ಅವರಿಗೆ ಖಂಡಿತವಾಗಿ ಜನರ ಆಶೀರ್ವಾದ ದೊರೆಯುತ್ತದೆ. ಅಂಥ ಕೆಲಸವನ್ನು ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಅವರು ಮಾಡಿದ್ದಾರೆ ಎಂದರು.
ನೂಪುರ್ ಶರ್ಮಾಗೆ ಸುಪ್ರೀಂ ಕೋರ್ಟ್ ತರಾಟೆ; ಉದಯ್ ಪುರ ಟೈಲರ್ ಹತ್ಯೆಗೆ ನಿಮ್ಮ ಹೇಳಿಕೆಯೇ ಕಾರಣ ಎಂದ ನ್ಯಾಯಾಲಯ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button