Latest

ಉಚಿತ ವ್ಯಾಕ್ಸಿನ್ ಖಾಸಗಿ ಆಸ್ಪತ್ರೆಗೆ ಮಾರಾಟ; ಶಾಸಕರ ವಿರುದ್ಧ ಗಂಭೀರ ಆರೋಪ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸರ್ಕಾರದಿಂದ ಕೊಡಲಾಗುತ್ತಿರುವ ಉಚಿತ ವ್ಯಾಕ್ಸಿನ್ ನನ್ನು ಖಾಸಗಿ ಆಸ್ಪತ್ರೆಗಳಿಗೆ ಮಾರಾಟ ಮಾಡಿ, ಶಾಸಕರೇ ಕಮಿಷನ್ ಪಡೆಯುವ ದಂಧೆಗೆ ಇಳಿದಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಬೆಂಗಳೂರಿನ ಬಸವನಗುಡಿ ಶಾಸಕ ರವಿ ಸುಬ್ರಹ್ಮಣ್ಯ ವಿರುದ್ಧ ಸಾಮಾಜಿಕ ಕಾರ್ಯಕರ್ತ ವೆಂಕಟೇಶ್ ಇಂತದ್ದೊಂದು ಆರೋಪ ಮಾಡಿದ್ದು, ಸರ್ಕಾರ ನೀಡುತ್ತಿರುವ ಉಚಿತ ಲಸಿಕೆಯನ್ನು ಖಾಸಗಿ ಆಸ್ಪತ್ರೆಗಳಿಗೆ ಮಾರಾಟ ಮಾಡುತ್ತಿದ್ದಾರೆ ಎಂದಿದ್ದಾರೆ.

ಶಾಸಕರು ವ್ಯಾಕ್ಸಿನ್ ಪಡೆದು ಅನುಗ್ರಹ ವಿಠಲ ಎಂಬ ಖಾಸಗಿ ಆಸ್ಪತ್ರೆಗೆ ಮಾರಾಟ ಮಾಡುತ್ತಿದ್ದು, ಪ್ರತಿ ಡೋಸ್ ಲಸಿಕೆಗೆ 700 ರೂಪಾಯಿಯಂತೆ ಕಮಿಷನ್ ಪಡೆದುಕೊಳ್ಳುತ್ತಿದ್ದಾರೆ. ಈ ಬಗ್ಗೆ ಆಸ್ಪತ್ರೆಯ ಸಿಬ್ಬಂದಿಯೇ ಬಾಯ್ಬಿಟ್ಟಿದ್ದಾಗಿ ಸಾಮಾಜಿಕ ಕಾರ್ಯಕರ್ತ ಆರೋಪಿಸಿದ್ದಾರೆ.

ಪೆಟ್ರೋಲ್ ಡೀಸೆಲ್ ದರದಲ್ಲಿ ಮತ್ತೆ ಏರಿಕೆ

Related Articles

Back to top button