
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಹಿಳೆಯೊಬ್ಬರ ಮೊಬೈಲ್ ನಂಬರ್ ಹ್ಯಾಕ್ ಮಾಡಿದ ಕಿಡಿಗೇಡಿಗಳು ಸ್ನೇಹಿತರಿಗೆ ಅಶ್ಲೀಲ ಸಂದೇಶ ಕಳುಹಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ಬಸವನಗುಡಿ ನಿವಾಸಿ 36 ವರ್ಷದ ಮಹಿಳೆಯ ನಂಬರ್ ಹ್ಯಾಕ್ ಮಾಡಿ ಈ ಕೃತ್ಯ ಎಸಗಲಾಗಿದೆ. ಈ ಕುರಿತು ಸಂತ್ರಸ್ತ ಮಹಿಳೆ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಸಂತ್ರಸ್ತ ಮಹಿಳೆ ಹಾಗೂ ಅವರ ಸ್ನೇಹಿತರು ಸೇರಿ ಒಂದು ವಾಟ್ಸಾಪ್ ಗ್ರೂಪ್ ಕ್ರಿಯೇಟ್ ಮಾಡಿದ್ದರು. ಈ ಗ್ರೂಪ್ ಗೆ ಸಂತ್ರಸ್ತ ಮಹಿಳೆ ಕೂಡ ಅಡ್ಮಿನ್ ಆಗಿದ್ದರು. ಇದೇ ವೇಳೆ ಯಾರೋ ಅಪರಿಚಿತರು ಕರೆಮಾಡಿ ನಿಮಗೆ ಕಳುಹಿಸಿರುವ ಲಿಂಕ್ ಓಪನ್ ಮಾಡಿ ಎಂದು ಕರೆ ಕಟ್ ಮಾಡಿದ್ದಾರೆ.
ಲಿಂಕ್ ಓಪನ್ ಮಾಡುತ್ತಿದ್ದಂತೆ ಮಹಿಳೆಯ ನಂಬರ್ ಹ್ಯಾಕ್ ಆಗಿದೆ. ಹ್ಯಾಕ್ ಆಗಿದ್ದೇ ಗ್ರೂಪ್ ನಲ್ಲಿರೋ ಎಲ್ಲ ನಂಬರ್ ಗೆ ಕೆಲ ಅಶ್ಲೀಲ ಫೋಟೋ ಕಳುಹಿಸಲಾಗಿದೆ. ಅಷ್ಟೇ ಅಲ್ಲದೆ, ಮಹಿಳೆಯ ನಂಬರ್ನಿಂದ ಅಶ್ಲೀಲ ವಿಡಿಯೋಗಳನ್ನೂ ಕಳುಹಿಸಿದ್ದು, ಆ ಮಹಿಳೆಗೆ ತನ್ನ ಸ್ನೇಹಿತರಿಂದಲೇ ಕರೆ ಬರೋಕೆ ಶುರುವಾಗಿದೆ. ಇದಾದ ಬಳಿಕ ಮತ್ತೆ ಮಹಿಳೆ ನಂಬರ್ ಹ್ಯಾಕ್ ಮಾಡಿದ ಹ್ಯಾಕರ್ಸ್ ನಿಮ್ಮ ಹಾಟ್ ಫೋಟೋ ಕಳುಹಿಸಿ, ಒಂದೊಂದು ಫೋಟೋಗೆ ಇಂತಿಷ್ಟು ಹಣ ಕೊಡುತ್ತೇನೆ ಎಂದು ಹೇಳಿದ್ದಾರೆ. ಇದರಿಂದ ಗಾಬರಿಯಾದ ಮಹಿಳೆ ಪೊಲಿಸರ ಮೊರೆ ಹೋಗಿದ್ದಾಳೆ.
ದೂರು ದಾಖಲಿಸಿಕೊಂಡಿರುವ ಪೊಲೀಸರು ಮಹಿಳೆಯ ವಾಟ್ಸಾಪ್ ಗ್ರೂಪ್ ನಲ್ಲಿರುವ ಎಲ್ಲರನ್ನೂ ವಿಚಾರಣೆಗೆ ಒಳಪಡಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ