ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಯುವಕರ ಗುಂಪೊಂದು ನಡುರಸ್ತೆಯಲ್ಲಿಯೇ ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿಗಳ ಮೇಲೆ ಮನಸೋ ಇಚ್ಛೆ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಯಲಹಂಕದಲ್ಲಿ ನಡೆದಿದೆ.
ಇಲ್ಲಿನ ಚಿಕ್ಕಬೆಟ್ಟಹಳ್ಳಿಯಲ್ಲಿ ಬೇಕಾಬಿಟ್ಟಿಯಾಗಿ ಓಡಾಡುತ್ತಿದ್ದ ಯುವಕರ ಗುಂಪನ್ನು ತಡೆದ ಪೊಲೀಸರು, ಮಾಸ್ಕ್ ಹಾಕದೇ ಇರುವುದನ್ನು ಪ್ರಶ್ನಿಸಿದ್ದಾರೆ. ಅಲ್ಲದೇ ವ್ಯಾಕ್ಸಿನೇಷನ್ ಬಗ್ಗೆಯೂ ಕೇಳಿದ್ದಾರೆ. ಇದಕ್ಕೆ ಕೋಪಗೊಂಡ ಯುವಕರ ಗುಂಪು ಪೊಲಿಸರನ್ನೇ ಹಿಡಿದು ಥಳಿಸಿದೆ.
ಸಬ್ ಇನ್ಸ್ ಪೆಕ್ಟರ್ ಸೇರಿದಂತೆ ಮೂವರು ಪೊಲೀಸ್ ಸಿಬ್ಬಂದಿಗಳ ಮೇಲೆ ಯುವಕರು ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಪೊಲಿಸರ ಮೇಲೆ ಯುವಕರು ಹಲ್ಲೆ ನಡೆಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಯಲಹಂಕ ನ್ಯೂ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನಾಪತ್ತೆಯಾಗಿರುವ ಪುಂಡರಿಗಾಗಿ ಹುಡುಕಾಟ ನಡೆದಿದೆ.
ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರ; ಹೆಚ್.ಡಿ.ಕೆ ಸ್ಪಷ್ಟನೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ