
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಬೆಂಕಿ ಅವಘಡ ಸಂಭವಿದೆ. ಪಬ್ ವೊಂದರ ನಾಲ್ಕನೇ ಮಹಡಿಯಲ್ಲಿ ಅಗ್ನಿ ಆಕಸ್ಮಿಕ ಸಂಭವಿಸಿದ್ದು, ವ್ಯಕ್ತಿಯೋರ್ವ ಜೀವ ಉಳಿಸಿಕೊಳ್ಳಲು ಕಟ್ಟಡದ ಮೇಲಿನಿಂದ ಕೆಳಗೆ ಹಾರಿದ್ದಾನೆ.
ಬೆಂಗಳೂರಿನ ತಾವರಕೆರೆ ಮುಖ್ಯರಸ್ತೆಯಲ್ಲಿರುವ ಪಬ್ ವೊಂದರ ನಾಲ್ಕನೇ ಮಹಡಿಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ನಾಲ್ಕನೇ ಮಹಡಿ ಧಗ ಧಗನೆ ಹೊತ್ತಿ ಉರಿದಿದೆ. ಬೆಂಕಿಯ ಕೆನ್ನಾಲಿಗೆ ವ್ಯಾಪಿಸುತ್ತಿದ್ದಂತೆ ವ್ಯಕ್ತಿಯೋರ್ವ ಕಟ್ಟಡದ ಮೇಲಿನಿಂದ ಕೆಳಗೆ ಜಿಗಿದಿದ್ದಿದ್ದಾನೆ.
ಈ ಭಯಂಕರ ದೃಶ್ಯ ಕ್ಯಾಮರಾ ಕಣ್ಣಲ್ಲಿ ಸೆರೆಯಾಗಿದೆ. ಕಟ್ಟದ ತುಂಬೆಲ್ಲಾ ಬೆಂಕಿ ಆವರಿಸಿಕೊಳ್ಳುತ್ತಿದ್ದು, ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ. ಬೆಂಕಿ ಅವಘಡಕ್ಕೆ ಕಾರಣ ತಿಳಿದುಬಂದಿಲ್ಲ.