*ಬೀಚ್ ರೆಸಾರ್ಟ್ ನಲ್ಲಿ ಭೀಕರ ಬೆಂಕಿ ಅವಘಡ*: *10 ಜನರು ಸಜೀವದಹನ*

ಪ್ರಗತಿವಾಹಿನಿ ಸುದ್ದಿ: ಬೀಚ್ ರೆಸಾರ್ಟ್ ಒಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ 10 ಜನರು ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಬಾಂಗ್ಲಾ ದೇಶದ ಆಗ್ನೇಯ ಭಾಗದಲ್ಲಿರುವ ಕಡಲತೀರದ ಕಾಕ್ಸ್ ಬಜಾರ್ ಜಿಲ್ಲೆಯ ಇನಾನಿಯಲ್ಲಿರುವ ‘ತುಪ್‌ತುಪ್ ರೆಸ್ಟೋ & ರೆಸಾರ್ಟ್’ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಹತ್ತು ಜನರು ಸಜೀವದಹನವಾಗಿದ್ದಾರೆ. ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂರು ಅಂತಸ್ತಿನ ಮಾದ ರೆಸಾರ್ಟ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ಸಮಯದಲ್ಲಿ ಇಡೀ ರೆಸಾರ್ಟ್ ಗೆ ವ್ಯಾಪಿಸಿದೆ. … Continue reading *ಬೀಚ್ ರೆಸಾರ್ಟ್ ನಲ್ಲಿ ಭೀಕರ ಬೆಂಕಿ ಅವಘಡ*: *10 ಜನರು ಸಜೀವದಹನ*