ತ್ರಿಪುರಾದಲ್ಲಿ ಲ್ಯಾಂಡ್ ಆದ ಹಸೀನಾ ಹೆಲಿಕಾಪ್ಟರ್
ಪ್ರಗತಿವಾಹಿನಿ ಸುದ್ದಿ: ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಮೀಸಲಾತಿ ವಿಚಾರವಾಗಿ ಬಾಂಗ್ಲಾದಲ್ಲಿ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು. ಹಿಂಸಾಚಾರದಲ್ಲಿ 100ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಪ್ರತಿಭಟನೆ ಇನ್ನಷ್ಟು ಉಗ್ರ ಸ್ವರೂಪ ಪಡೆದಿದ್ದು, ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ನಿವಾಸದತ್ತಲೂ ಪ್ರತಿಭಟನಾಕಾರರು ನುಗ್ಗಿದ್ದರು.
ಈ ಎಲ್ಲಾ ಬೆಳವಣಿಗೆ ಬೆನ್ನಲ್ಲೇ ಶೇಖ್ ಹಸೀನಾ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಬೆನ್ನಲ್ಲೇ ಢಾಕಾ ತೊರೆದಿರುವ ಶೇಖ್ ಹಸೀನಾ, ಭಾರತಕ್ಕೆ ಆಗಮಿಸಿದ್ದಾರೆ. ಶೇಖ್ ಹಸೀನಾ ರಾಜೀನಾಮೆ ಬಳಿಕ ಬಾಂಗ್ಲಾದಲ್ಲಿ ಅರಾಜಕತೆ ಸೃಷ್ಟಿಯಾಗಿದ್ದು, ಸೇನಾಡಳಿತ ಆರಂಭವಾಗುವ ಸಾಧ್ಯತೆ ಇದೆ.
ಇನ್ನೊಂದೆಡೆ ಬಾಂಗ್ಲಾ ತೊರೆದಿರುವ ಶೇಖ್ ಹಸೀನಾ ಭಾರತಕ್ಕೆ ಆಗಮಿಸಿದ್ದು, ಶೇಖ್ ಹಸೀನಾ ಹೆಲಿಕಾಪ್ಟರ್ ತ್ರಿಪುರಾದಲ್ಲಿ ಲ್ಯಾಂಡ್ ಆಗಿದೆ. ಬಿಎಸ್ ಎಫ್ ಸೇನಾ ಸಿಬ್ಬಂದಿಗಳು ಶೇಖ್ ಹಸೀನಾ ಅವರನ್ನು ಸುರಕ್ಷಿತ ಸ್ಥಳಕ್ಕೆ ಕರೆದೊಯ್ದಿದ್ದಾರೆ ಎಂದು ತಿಳಿದುಬಂದಿದೆ.
ಇನ್ನೊಂದೆಡೆ ಭಾರತ-ಬಾಂಗ್ಲಾ ಗಡಿಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ