Latest

ಕಂಟೈನರ್ ಡಿಪೋದಲ್ಲಿ ಅಗ್ನಿ ದುರಂತ; 16 ಜನರು ಸಜೀವ ದಹನ

ಪ್ರಗತಿವಾಹಿನಿ ಸುದ್ದಿ; ಬಾಂಗ್ಲಾ: ಕಂಟೈನರ್ ಡಿಪೋದಲ್ಲಿ ಬೆಂಕಿ ಅವಘಡ ಸಂಭವಿಸಿ 16 ಜನರು ಮೃತಪಟ್ಟಿದ್ದು, 450ಕ್ಕು ಹೆಚ್ಚು ಜನರು ಗಾಯಗೊಂದಿರುವ ಘಟನೆ ಬಾಂಗ್ಲಾದೇಶದಲ್ಲಿ ನಡೆದಿದೆ.

ಆಗ್ನೇಯ ಬಾಂಗ್ಲಾದ ಕಂಟೈನರ್ ಡಿಪೊದಲ್ಲಿ ಈ ದುರಂತ ಸಂಭವಿಸಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಲ್ಲಿ 20 ಜನರ ಸ್ಥಿತಿ ಗಂಭೀರವಾಗಿದೆ. ಶೇ.60-90ರಷ್ಟು ಸುಟ್ಟ ಗಾಯಗಳಿಂದ ಅವರು ಬಳಲುತ್ತಿದ್ದಾರೆ ಎಂದು ತಿಳಿದುಬಂದಿದೆ.

ಬಾಂಗ್ಲಾದ ಬಂದರು ಚಿತ್ತಗಾಂಗ್ ನ ಹೊರಗೆ 40 ಕಿ.ಮೀ ದೂರದಲ್ಲಿರುವ ದೇಶೀಯ ಕಂಟೇನರ್ ಸಂಗ್ರಹಣಾ ಘಟಕದಲ್ಲಿ ಕಾಣಿಸಿಕೊಂಡ ಬೆಂಕಿ ಕ್ಷಣಾರ್ಧದಲ್ಲಿ ಡಿಪೋ ತುಂಬ ವ್ಯಾಪಿಸಿದೆ. ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಆದರೆ ಗೋದಾಮಿನ ಕೆಲ ಕಂಟೈನರ್ ಗಳಲ್ಲಿ ಹೈಡ್ರೋಜನ್ ಪೆರಾಕ್ಸೈಡ್ ಸೇರಿದಂತೆ ರಾಸಾಯನಿಕಗಳಿದ್ದವು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ರೀತಿ ಮಾಡಿಯೇ ಕಾಂಗ್ರೆಸ್ ಎಲ್ಲೆಡೆ ನೆಲೆ ಕಳೆದುಕೊಂಡಿದೆ; ಸಿಎಂ ಬೊಮ್ಮಾಯಿ ವಾಗ್ದಾಳಿ

Home add -Advt

Related Articles

Back to top button