Karnataka NewsLatest

*ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಬ್ಯಾಂಕ್ ಉದ್ಯೋಗಿ*

ಪ್ರಗತಿವಾಹಿನಿ ಸುದ್ದಿ: ಮೇಲಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಬ್ಯಾಂಕ್ ಉದ್ಯೋಗಿಯೊಬ್ಬರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.

ಚಿತ್ರದುರ್ಗದ ಹೊಸದುರ್ಗ ತಾಲೂಕಿನ ಖಾಸಗಿ ಲಾಡ್ಜ್ ನಲ್ಲಿ ಐಡಿಎಫ್ ಸಿ ಬ್ಯಾಂಕ್ ಉದ್ಯೋಗಿ ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎಂ.ಸಂತೋಷ್ ಆತ್ಮಹತ್ಯೆಗೆ ಶರಣಾದವರು.

ಲಾಡ್ಜ್ ರೂಮಿನಲ್ಲಿಯೇ ನೇಣಿಗೆ ಕೊರಳೊಡ್ಡಿದ್ದಾರೆ. ಬೆಂಗಳೂರಿನಲ್ಲಿ ಐಡಿಎಫ್ ಸಿ ಬ್ಯಾಂಕ್ ಉದ್ಯೋಗಿಯಾಗಿದ್ದ ಸಂತೋಷ್ ಕೆಲ ದಿನಗಳ ಹಿಂದೆ ಮಧ್ಯಪ್ರದೇಶಕ್ಕೆ ವರ್ಗಾವಣೆಗೊಂಡಿದ್ದರು. ಆದರೆ ಅನಾರೋಗ್ಯ ಕಾರಣದಿಂದ ಸಂತೋಷ್ ಕರ್ನಾಟಕದಲ್ಲೇ ಇರಲು ಬಯಸಿದ್ದರು. ಹೀಗಾಗಿ ಬ್ಯಾಂಕ್ ಮುಖ್ಯಸ್ಥರು ಎರಡು ದಿನ ಹೊಸದುರ್ಗದಲ್ಲಿರಲು ಕಳುಹಿಸಿದ್ದರು. ಹೊಸದುರ್ಗದ ಐಡಿಎಫ್ ಸಿ ಬ್ಯಾಂಕ್ ಕಟ್ಟಡದ ಮೇಲ್ಭಾಗದಲ್ಲಿರುವ ಲಾಡ್ಜ್ ರೂಮಿನಲ್ಲಿಯೇ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಬ್ಯಾಂಕ್ ಮೇಲಧಿಕಾರಿಗಳ ಕಿರುಕುಳದಿಂದ ಆತ್ಮಹತ್ಯೆಗೆ ಶರಣಾಗುತ್ತಿರುವುದಾಗಿ ಡೆತ್ ನೋಟ್ ಬರೆದಿಟ್ಟಿದ್ದಾರೆ. ಲಂಚ ನೀಡಿದರೆ ಮಾತ್ರ ಐಡಿಎಫ್ ಸಿಯಲ್ಲಿ ಕೆಲಸವಾಗುತ್ತದೆ. ಬ್ಯಾಂಕ್ ನನ್ನ ಸಾವಿಗೆ ಪರಿಹಾರ ನೀಡಬೇಕು ಎಂದು ಉಲ್ಲೇಖಿಸಿದ್ದಾರೆ.

Home add -Advt

ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button