Karnataka News
*ಬ್ಯಾಂಕ್ ವಂಚನೆ ಪ್ರಕರಣ: ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ಸೇರಿ ನಾಲ್ವರು ಆರೋಪಿಗಳಿಗೆ ಜೈಲು ಶಿಕ್ಷೆ ಪ್ರಮಾಣ ಪ್ರಕಟಿಸಿದ ಕೋರ್ಟ್*
![](https://pragativahini.com/wp-content/uploads/2025/02/IMG_20250206_131103_650_x_350_pixel.jpg)
ಪ್ರಗತಿವಾಹಿನಿ ಸುದ್ದಿ: ನಕಲಿ ದಾಖಲೆ ಸೃಷ್ಟಿಸಿ ಬ್ಯಾಂಕ್ ಗೆ ಕೋಟ್ಯಂತರ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕೃಷ್ಣ ಶಟ್ಟಿಗೆ ಮೂರು ವರ್ಷ ಜೈಲು ಶಿಕ್ಷೆ ವಿಧಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ತೀರ್ಪು ಪ್ರಕಟಿಸಿದೆ.
ಕೃಷ್ಣಯ್ಯ ಶೆಟ್ಟಿ ಸೇರಿದಂತೆ ನಾಲ್ವವರು ಆರೋಪಿಗಳು ದೋಷಿಗಳೆಂದು ಬೆಳಿಗ್ಗೆ ಕೋರ್ಟ್ ತೀರ್ಪು ನೀಡಿತ್ತು. ಶಿಕ್ಷೆ ಪ್ರಮಾಣವನ್ನು ಕಾಯ್ದಿರಿಸಿತ್ತು. ಇದೀಗ ನ್ಯಾಯಾಲಯ ನಾಲ್ವರು ಆರೋಪಿಗಳಿಗೆ ಜೈಲುಶಿಕ್ಷೆ ಪ್ರಮಾಣ ಪ್ರಕಟಿಸಿದೆ.
ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ, ಎಂಟಿವಿ ರೆಡ್ದಿ, ಮುನಿರಾಜು ಹಾಗೂ ಶ್ರೀನಿವಾಸ್ ಗೆ 3 ವರ್ಷ ಜೈಲು ಶಿಕ್ಷೆ ಹಾಗೂ ತಲಾ 1 ಲಕ್ಷ ರೂಪಾಯಿ ದಂಡ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ