
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಾರ್ವಜನಿಕ ವಲಯದ ಬ್ಯಾಂಕ್ ಗಳ ಖಾಸಗಿಕರಣ ವಿರೋಧಿಸಿ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್ ಮಾರ್ಚ್ 15 ಹಾಗೂ 16ರಂದು ದೇಶಾದ್ಯಂತ ಮುಷ್ಕರಕ್ಕೆ ಕರೆ ನೀಡಿದೆ.
ನಾಳೆ ಎರಡನೇ ಶನಿವಾರ ಹಾಗೂ ಭಾನುವಾರ ರಜೆ ಇದ್ದು, ಸೋಮವಾರ ಹಾಗೂ ಮಂಗಳವಾರ ನೌಕರರ ಮುಷ್ಕರ ನಡೆಯಲಿದೆ. ಹೀಗಾಗಿ ಬ್ಯಾಂಕ್ ಗಳಿಗೆ ಸಾಲು ಸಾಲು ರಜೆಗಳಿರುವುದರಿಂದ ಬ್ಯಾಂಕ್ ಕೆಲಸಗಳಿದ್ದರೆ ಇಂದೇ ಮುಗಿಸಿಕೊಳ್ಳುವುದು ಒಳಿತು.