Film & EntertainmentKannada NewsKarnataka NewsLatest

*ಹಿರಿಯ ನಟ ಬ್ಯಾಂಕ್ ಜನಾರ್ಧನ್ ಗೆ ಹೃದಯಾಘಾತ*

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಬ್ಯಾಂಕ್ ಜನಾರ್ಧನ್ ಅವರಿಗೆ ಹೃದಯಾಘತವಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬೆಂಗಳುರಿನ ಖಾಸಗಿ ಆಸ್ಪತ್ರೆಯಲ್ಲಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತಂದೆಯ ಆರೋಗ್ಯದ ಬಗ್ಗೆ ಪುರ ಗುರುಪ್ರಸಾದ್ ಪ್ರತಿಕ್ರಿಯಿಸಿದ್ದು, ಹೆದರುವ ಅಗತ್ಯವಿಲ್ಲ. ಚಿಕಿತ್ಸೆ ಮುಂದುವರೆದಿದೆ ಎಂದು ತಿಳುಸಿದ್ದಾರೆ.

Home add -Advt

ಸಧ್ಯ ಅವರಿಗೆ ಆಂಜಿಯೋಗ್ರಾಂ ಮಾಡಲಾಗುತ್ತಿದೆ. ಆರೋಗ್ಯ ಸ್ಥಿರವಾಗಿದೆ ಎಂದು ತಿಳಿಸಿದ್ದಾರೆ. 1991ರಲ್ಲಿ ಅಜಗಜಾಂತರ ಸಿನಿಮಾ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ಬ್ಯಾಂಕ್ ಜನಾರ್ಧನ್, ಬಳಿಕ ಗೌರಿ ಗಣೇಶ, ತರ್ಲೆ ನನ್ಮಗ, ಶ್ ಸೆರಿದಂತೆ ಹಲವು ಸಿನಿಮಗಳಲ್ಲಿ ನಟಿಸಿದ್ದಾರೆ.

ಹಲವು ನಾಟಕ ಹಾಗೂ ಧಾರಾವಾಹಿಗಳಲ್ಲಿಯೂ ಅಭಿನಯಿಸಿದ್ದಾರೆ. ಹಾಸ್ಯ ಹಾಗೂ ವಿಲನ್ ಪಾತ್ರಗಳ ಮೂಲಕ ಬ್ಯಾಂಕ್ ಜನಾರ್ಧನ್ ಗಮನ ಸೆಳೆದಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button