Kannada NewsLatestNational
*ಡಿವೈಡರ್ ಗೆ ಡಿಕ್ಕಿಯಾಗಿ ಹೊತ್ತಿ ಉರಿದ ಕಾರು: ಐವರು ಸಜೀವದಹನ*

ಪ್ರಗತಿವಾಹಿನಿ ಸುದ್ದಿ: ಡಿವೈಡರ್ ಗೆ ಕಾರು ಡಿಕ್ಕಿ ಹೊಡೆದು ಪಲ್ಟಿಯಾಗಿ ಬಿದ್ದು ಹೊತ್ತಿ ಉರಿದ ಪರಿಣಾಮ ಕಾರಿನಲ್ಲಿದ್ದ ಐವರು ಸಜೀವದಹನವಾಗಿರುವ ಘಟನೆ ಉತ್ತರ ಪ್ರದೇಶದ ಬುಲಂದರ್ ಶಹರ್ ನಲ್ಲಿ ನಡೆದಿದೆ.
ಅಪಗಹತದ ರಭಸಕ್ಕೆ ಕಾರಿನ ಡೋರ್ ಲಾಕ್ ಆಗಿದ್ದರಿಂದ ಹೊರಬರಲಾಗದೇ ಕಾರಿನಲ್ಲಿಯೇ ಐವರು ಸಜೀವದಹನವಾಗಿದ್ದಾರೆ. ಓರ್ವ ಮಹಿಳೆ ಸ್ಥಿತಿ ಗಂಭೀರವಾಗಿದೆ.
ಬದೌನ್ ನಲ್ಲಿ ಮದುವೆ ಕಾರ್ಯಕ್ರಮಕ್ಕೆ ಹೋಗಿ ದೆಹಲಿಗೆ ವಾಪಸ್ ಆಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.ಚಾಲಕ ನಿದ್ದೆ ಅಮಲಿನಲ್ಲಿ ಕಾರು ಓಡಿಸುತ್ತಿದ್ದ ಕಾರಣ ನಿಯಂತ್ರಣ ತಪ್ಪಿದ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಕ್ಷಣರಧದಲ್ಲೇ ಕಾರಿಗೆ ಬೆಂಕಿಹೊತ್ತಿಕೊಂಡಿದೆ.
ಗಾಯಾಳು ಮಹಿಳೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.




