
ಪ್ರಗತಿವಾಹಿನಿ ಸುದ್ದಿ: ಬ್ಯಾಂಕ್ ಮ್ಯಾನೇಜರ್ ಓರ್ವ ಬ್ಯಾಅಂಕ್ ನಲ್ಲಿಟ್ಟಿದ್ದ ಚಿನ್ನಾಭರಣಗಳನ್ನೇ ಕದ್ದು ಎಸ್ಕೇಪ್ ಆಗಿರುವ ಘಟನೆ ಬೆಳಕಿಗೆ ಬಂದಿದೆ.
ಬೆಂಗಳೂರು ಗಿರಿನಗರದ ಇಂಡಿಯನ್ ಬ್ಯಾಂಕ್ನಲ್ಲಿ 4 ಕೋಟಿ ಮೌಲ್ಯದ ಚಿನ್ನ ಕಳ್ಳತನವಾಗಿದೆ. ಬ್ಯಾಂಕ್ ಸಹಾಯಕ ವ್ಯವಸ್ಥಾಪಕ ಕಿರಣ್ ಕುಮಾರ್ ಗ್ರಾಹಕರು ಅಡವಿಟ್ಟ ಚಿನ್ನಾಭರಣವನ್ನು ಕದ್ದು ಮಾರಾಟ ಮಾಡಿದ್ದಾನೆ.
ಆನ್ಲೈನ್ ಬೆಟ್ಟಿಂಗ್ ಚಟಕ್ಕೆ ಬಿದ್ದಿದ್ದ ಕಿರಣ್, ಬ್ಯಾಂಕ್ ನಲ್ಲಿ ಗ್ರಾಹಕರ ಚಿನ್ನಕ್ಕೆ ಕನ್ನ ಹಾಕುತ್ತಿದ್ದಾ. ಕೃತ್ಯ ಬಯಲಾದ ನಂತರ ಪೊಲೀಸರು ಆತನನ್ನು ಬಂಧಿಸಿ, 700 ಗ್ರಾಂ ಚಿನ್ನ ವಶಪಡಿಸಿಕೊಂಡಿದ್ದಾರೆ. ಉಳಿದ ಚಿನ್ನ ಪತ್ತೆಗೆ ತನಿಖೆ ಮುಂದುವರಿಸಿದ್ದಾರೆ.
ರಣ್ ಕುಮಾರ್ ಗಿರಿನಗರದ ಇಂಡಿಯನ್ ಬ್ಯಾಂಕ್ ಶಾಖೆಯಲ್ಲಿ ಅಸಿಸ್ಟೆಂಟ್ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದಿದ್ದು, ಲಾಕರ್ ಕೀ ಮ್ಯಾನೇಜರ್ ಹಾಗೂ ಅಸಿಸ್ಟೆಂಟ್ ಮ್ಯಾನೇಜರ್ ಹತ್ತಿರ ಇದ್ದ ಕಾರಣ, ಮ್ಯಾನೇಜರ್ ಅವರ ಅನುಪಸ್ಥಿತಿಯಲ್ಲಿ ಚಿನ್ನ ಕದಿಯುತ್ತಿದ್ದ . ಜನವರಿ 2ರಂದು ಗ್ರಾಹಕರು ತಮ್ಮ ಅಡವಿಟ್ಟ ಚಿನ್ನ ಪಡೆಯಲು ಬಂದಾಗ ಲಾಕರ್ ಪರಿಶೀಲನೆ ನಡೆಸಿದ ವೇಳೆ ಕೆಲವು ಚಿನ್ನಾಭರಣಗಳ ನಾಪತ್ತೆ ಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. ಬಳಿಕ ಇತರೆ ಅಡವಿಟ್ಟ ಚಿನ್ನ ಪರಿಶೀಲಿಸಿದ ಮ್ಯಾನೇಜರ್ 21 ಪ್ಯಾಕೇಟ್ಗಳಲ್ಲಿ ಕೆಲವು ಹಾಗೂ 3 ಪ್ಯಾಕೇಟ್ಗಳಲ್ಲಿ ಸಂಪೂರ್ಣ ಚಿನ್ನ ಕಾಣೆಯಾಗಿರುವುದನ್ನು ಗಮನಿಸಿದ್ದಾರೆ. ಬರೋಬ್ಬರಿ 4 ಕೋಟಿ ರೂ. ಮೌಲ್ಯದ 2,783 ಗ್ರಾಂ ಚಿನ್ನ ಕಾಣೆಯಾಗಿದೆ ಎಂಬುದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ದೂರು ದಾಖಲಾಗಿತ್ತು.



