LatestTech

ಎಬಿವಿಪಿ ವತಿಯಿಂದ ಪತ್ರ ಚಳುವಳಿ ಅಭಿಯಾನ

ಪ್ರಗತಿವಾಹಿನಿ ಸುದ್ದಿ; ಬಂಟ್ವಾಳ: ವ್ಯಾಪಕವಾಗಿ ಹರಡಿರುವ ಡ್ರಗ್ಸ್ ಮಾಫಿಯಾ ವಿರುದ್ಧ ಸೂಕ್ತ ಕಾನೂನನ್ನು ರೂಪಿಸಿ ಡ್ರಗ್ಸ್ ಮುಕ್ತ ಕರ್ನಾಟಕ ಮಾಡಲು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ರಾಜ್ಯಾದ್ಯಂತ ಪತ್ರ ಚಳುವಳಿಗೆ ಕರೆ ನೀಡಲಾಗಿದ್ದು,  ಇಂದು ಬಂಟ್ವಾಳ ಶಾಖೆ ವತಿಯಿಂದ ಬಿಸಿರೋಡು ಹಾಗೂ ಸಿದ್ದಕಟ್ಟೆ ಅಂಚೆ ಕಛೇರಿ ಬಳಿ ಪತ್ರ ಚಳುವಳಿಯನ್ನು ಹಮ್ಮಿಕೊಳ್ಳಲಾಗಿತ್ತು.

ಮಾದಕ ವಸ್ತುಗಳ ಬಳಕೆ ಇಂದು ಸಮಾಜದ ಎಲ್ಲಾ ಕ್ಷೇತ್ರಗಳಲ್ಲಿ ವ್ಯಾಪಿಸಿದೆ. ಈ ಜಾಲಕ್ಕೆ ಪ್ರಮುಖವಾಗಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಯುವ ಸಮುದಾಯವೇ ಬಲಿಯಾಗುತ್ತಿರುವುದು ಅಪಾಯಕಾರಿ ಸಂಗತಿ ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ, ಪ್ರಭಾವಿಗಳು ಭಾಗಿಯಾಗಿರುವ ಈ ಜಾಲವನ್ನು ಮಟ್ಟ ಹಾಕುವ ಸವಾಲು ರಾಜ್ಯ ಸರ್ಕಾರದ ಮುಂದಿದೆ. ಅದಕ್ಕಾಗಿ ಪ್ರಬಲ ಕಾನೂನನ್ನು ರೂಪಿಸುವುದು ಮಾತ್ರ ಪರಿಹಾರ. ಸರ್ಕಾರ ನಿಷ್ಪಕ್ಷಪಾತ ತನಿಖೆ ಹಾಗೂ ಕಾನೂನನ್ನು ರೂಪಿಸಿ ಈ ದಂಧೆಯ ವಿರುದ್ದ ಸಮರ ಸಾರಬೇಕೆಂದು ಎಬಿವಿಪಿ ಪತ್ರ ಚಳುವಳಿಯ ಮೂಲಕ ಆಗ್ರಹಿಸಿದೆ.

ಪತ್ರವನ್ನು ಮುಖ್ಯಮಂತ್ರಿಗಳ ವಿಳಾಸಕ್ಕೆ ಕಳುಹಿಸಿಕೊಡಲಾಗಿದೆ. ಈ ಸಂದರ್ಭದಲ್ಲಿ ತಾಲೂಕು ಸಂಚಾಲಕರಾದ ಹರ್ಷಿತ್ ಕೊಯಿಲ, ಸಹ ಸಂಚಾಲಕರಾದ ದಿನೇಶ್ ಕೊಯಿಲ, ನಗರ ಕಾರ್ಯದರ್ಶಿ ಅಖಿಲಾಷ್, ಕಾಲೇಜು ಘಟಕದ ಅದ್ಯಕ್ಷರಾದ ಗುರುಪ್ರಸಾದ್ ಸಿದ್ದಕಟ್ಟೆ,ನಗರ ಸಹ ಕಾರ್ಯದರ್ಶಿಗಳಾದ ನಾಗರಾಜ್ ಶೆಣೈ, ಗಗನ್ ,ಪ್ರಶಾಂತ್ ಅಜ್ಜಿಬೆಟ್ಟು ಮುಂತಾದವರು ಉಪಸ್ಥಿತರಿದ್ದರು

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button