Kannada NewsKarnataka NewsLatest

*ಪಿಎಸ್ಐ ಖೀರಪ್ಪ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ: ಬಂಟ್ವಾಳ ಗ್ರಾಮಾಂತರ ಠಾಣೆ ಪಿಎಸ್ ಐ ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.

ಖೀರಪ್ಪ (55) ಆತ್ಮಹತ್ಯೆಗೆ ಶರಣಾದವರು. ವೈಯಕ್ತಿಕ ಹಾಗೂ ಹಣಕಾಸಿನ ಸಮಸ್ಯೆಯಿಂದಾಗಿ ನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.

Home add -Advt

ಖೀರಪ್ಪ ಮೂಲತಃ ಉತ್ತರ ಕನ್ನಡ ಜಿಲ್ಲೆಯ ಕಾರವಾರದವರು. ನಾಲ್ಕು ತಿಂಗಳ ಹಿಂದಷ್ಟೇ ಬಂಟ್ವಾಳ ಗ್ರಾಮಾಂತರ ಠಾಣೆಯ ಪಿಎಸ್ ಐ ಆಗಿ ನೇಮಕಗೊಂಡಿದ್ದರು. ಇದೀಗ ಏಕಾಏಕಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬಂಟ್ವಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Related Articles

Back to top button