Kannada NewsKarnataka NewsNationalPolitics

*ಬಾನು ಮುಷ್ತಾಕ್ ದಸರಾ ಉದ್ಘಾಟಿಸುವುದು ಬೇಡ: ಹೈಕೋರ್ಟ್‌ ಮೆಟ್ಟಿಲೆರಿದ ಪ್ರತಾಪ್ ಸಿಂಹ*

ಪ್ರಗತಿವಾಹಿನಿ ಸುದ್ದಿ: ಈ ವರ್ಷದ ದಸರಾ ಉದ್ಘಾಟಕರಾಗಿ ಬೂಕ‌ರ್ ಪ್ರಶಸ್ತಿ ವಿಜೇತ ಲೇಖಕಿ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿರುವ ಸರ್ಕಾರದ ಕ್ರಮಕ್ಕೆ ಆರಂಭದಿಂದಲು ತೀವ್ರ ವಿರೋಧ ವ್ಯಕ್ತವಾಗಿದೆ. ಆದರೆ ಇದೀಗ ಇದನ್ನು ವಿರೋಧಿಸಿ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ದಸರಾ ಉದ್ಘಾಟನೆ ವೇಳೆ ಚಾಮುಂಡೇಶ್ವರಿ ದೇವಿ ಪ್ರತಿಮೆಗೆ ಪುಷ್ಪಾರ್ಚನೆ ಮಾಡುವುದರೊಂದಿಗೆ ವೇದಮಂತ್ರ ಮತ್ತು ಧಾರ್ಮಿಕ ಆಚರಣೆಗಳು ನಡೆಯಬೇಕು ಎಂಬುದು ಸಂಪ್ರದಾಯ. ಆದರೆ ಬಾನು ಮುಷ್ತಾಕ್ ಹಿಂದೂ ವಿರೋಧಿ ಹಾಗೂ ಕನ್ನಡ ವಿರೋಧಿ ನಿಲುವು ಹೊಂದಿದ್ದಾರೆಂದು ಪ್ರತಾಪ್ ಸಿಂಹ ತಮ್ಮ ಅರ್ಜಿಯಲ್ಲಿ ಆರೋಪಿಸಿದ್ದಾರೆ. ರಾಜ್ಯ ಸರ್ಕಾರ ಏಕಪಕ್ಷೀಯವಾಗಿ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವುದರಿಂದ ಹಿಂದೂಗಳ ಭಾವನೆಗೆ ಧಕ್ಕೆ ಉಂಟಾಗಿದೆ ಎಂದು ಅವರು ಹೇಳಿದ್ದಾರೆ. 

ಮೈಸೂರು ರಾಜಮನೆತನದವರೂ ಸರ್ಕಾರದ ನಿರ್ಧಾರವನ್ನು ವಿರೋಧಿಸಿದ್ದು, ಬಾನು ಮುಷ್ತಾಕ್ ಅವರಿಗೆ ನೀಡಿದ ಆಹ್ವಾನವನ್ನು ಹಿಂಪಡೆಯುವಂತೆ ಹೈಕೋರ್ಟ್ ನಿರ್ದೇಶನ ನೀಡಬೇಕೆಂದು ಪ್ರತಾಪ್ ಸಿಂಹ ಮನವಿ ಮಾಡಿದ್ದಾರೆ.

Home add -Advt

Related Articles

Back to top button