*ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ಹಿಂಪಡೆಯದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ*

ಜಿಲ್ಲಾಧಿಕಾರಿಗೆ ಹಿಂದೂ ಜಾಗರಣ ವೇದಿಕೆ ಮನವಿ
ಪ್ರಗತಿವಾಹಿನಿ ಸುದ್ದಿ: ಈ ಬಾರಿ ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವುದಕ್ಕೆ ರಜಯಾದ್ಯಂತ ತೀವ್ರ ವಿರೋಧ ವ್ಯಕ್ತವಾಗಿದೆ. ಈ ನಡುವೆ ಮೈಸೂರು ಜಿಲ್ಲಾ ಹಿಂದೂ ಜಾಗರಣಾ ವೇದಿಕೆ ಬಾನು ಮುಷ್ತಾಕ್ ಆಯ್ಕೆಯನ್ನು ಸರ್ಕಾರ ಕೂಡಲೇ ಹಿಂಪಡೆಯಬೇಕು ಎಲ್ಲವಾದಲ್ಲಿ ರಾಜ್ಯಾದ್ಯಂತ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.
ದಸರಾ ಉದ್ಘಾಟನೆಗೆ ಬಾನು ಮುಷ್ತಾ ಅವರ ಆಯ್ಕೆ ಮಾಡಿರುವುದು ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟಾಗುತ್ತಿದೆ. ಬಾನು ಮುಷ್ತಾಕ್ ದೇಶದ ಬಹುಸಂಖ್ಯಾತ ಹಿಂದುಗಳ ಭಾವನೆಗೆ ನಿರಂತರ ಧಕ್ಕೆ ತರುತ್ತಿರುವವರಲ್ಲಿ ಒಬ್ಬರಾಗಿದ್ದಾರೆ. ಅವರ ಆಯ್ಕೆಯನ್ನು ಸರ್ಕಾರ ತಕ್ಷಣ ಹಿಂಪಡೆಯಬೇಕು ಎಂದು ಹಿಂದೂ ಜಾಗರಣಾ ವೇದಿಕೆ ಒತ್ತಾಯಿಸಿದೆ.
ಚಾಮುಂಡೇಶ್ವರಿ ದೇವಿಯನ್ನು ಆರಾಧಿಸುವ ಹಿಂದೂ ಸಮಾಜ ಬಾನು ಮುಷ್ತಾಕ್ ಆಯ್ಕೆಯನ್ನು ವಿರೋಧಿಸುತ್ತದೆ. ಈ ಹಿಂದೆ ಬಾನು ಮುಷ್ತಾಕ್ ತಾಯಿ ಭುವನೇಶ್ವರಿ, ಅರಿಷಿಣ-ಕುಂಕುಮ, ಕನ್ನಡ ಭಾಷೆಯ, ನಾಡಿನ ಸಂಸ್ಕೃತಿಯ ಬಗ್ಗೆ ಸಂಕುಚಿತವಾಗಿ ಮಾತನಡಿದ್ದರು. ಇದರಿಂದ ಜನರ ಭಾವನೆಗೆ ಧಕ್ಕೆಯಾಗಿದೆ. ಅವರ ಬಗ್ಗೆ, ಅವರು ಬರೆದಿರುವ ಕೃತಿಗಳ ಬಗ್ಗೆ ನಮಗೆ ಅಪಾರ ಗ್ರೌವವಿದೆ. ಆದರೆ ದಸರಾ ಉದ್ಘಾಟಕರನ್ನಾಗಿ ಅವರನ್ನು ಆಯ್ಕೆ ಮಾಡಿರುವುದು ಸರಿಯಲ್ಲ. ರಾಜ್ಯ ಸರ್ಕಾರ ಅವರ ಆಯ್ಕೆ ಹಿಂಪಡೆಯಬೇಕು ಎಂದು ಹಿಂದೂ ಜಾಗರಣ ಅವೇದಿಕೆ ಒತ್ತಾಯಿಸಿದ್ದು, ಈ ಬಗ್ಗೆ ಮೈಸೂರು ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದೆ.